ಬಿಜೆಪಿ ರಾಯಬಾಗ ಮಂಡಲ ಪದಾಧಿಕಾರಿಗಳ ಸಭೆ

ಬಿಜೆಪಿ ರಾಯಬಾಗ ಮಂಡಲ ಪದಾಧಿಕಾರಿಗಳ ಸಭೆ

ರಾಯಬಾಗ 27: ಈ ಬಾರಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದಿಂದ ಜೊಲ್ಲೆಯವರನ್ನು ಗೆಲ್ಲಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು.  

ಮಂಗಳವಾರ ಪಟ್ಟಣ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರಾಯಬಾಗ ಮಂಡಲ ಪದಾಧಿಕಾರಿಗಳ, ಬೂತ ಅಧ್ಯಕ್ಷರ ಹಾಗೂ ಬಿಎಲ್‌ಒ-2ಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಪ್ರಾಮಾಣಿವಾಗಿ ಕೆಲಸ ಮಾಡಬೇಕೆಂದರು. ಚಿಕ್ಕೋಡಿ ಮತಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ಕ್ಷೇತ್ರದಲ್ಲಿ ಅನೇಕ ಮಹಿಳೆಯರಿಗೆ, ಯುವಕರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಿದ್ದಾರೆ ಎಂದರು.  

ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಅಭ್ಯರ್ಥಿ, ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಕಳೆದ 5 ವರ್ಷದಲ್ಲಿ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಕ್ಷೇತ್ರದಲ್ಲಿನ 2 ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ ಎಂದರು.  

ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಭಾರಿ ಹಾಗೂ ಶಾಸಕ ಅಭಯ ಪಾಟೀಲ ಮಾತನಾಡಿ, ಬೂತಮಟ್ಟದ ಪದಾಧಿಕಾರಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಪ್ರಾಮಾಣಿಕ ಕೆಲಸ ಮಾಡಬೇಕು. ಬಿಜೆಪಿ ಪಕ್ಷ ಪ್ರತಿಯೊಂದು ಮನೆಳಿಗೆ ಸಂಪರ್ಕ ಮಾಡುವ ಏಕೈಕ ಪಕ್ಷವಾಗಿದೆ. ಇದೊಂದು ದೇಶಕ್ಕಾಗಿ ಸೇವೆ ಮಾಡಲು ನಮಗೆಲ್ಲರಿಗೂ ಒದಗಿ ಬಂದ ಪುಣ್ಯವೆಂದು ತಿಳಿದು, ದೇಶ ಮತ್ತು ಪಕ್ಷವನ್ನು ಕಟ್ಟಲು ಎಲ್ಲರೂ ಕೈಜೋಡಿಸಬೇಕೆಂದರು. 

ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ರಾಜೇಶ ನೇರ್ಲಿ, ಮಹೇಶ ಭಾತೆ, ರಾಜಶೇಖರ ಖನದಾಳೆ, ಸದಾನಂದ ಹಳಿಂಗಳಿ, ಎಲ್‌.ಬಿ.ಚೌಗುಲೆ, ರಮೇಶ ಕಾಳನ್ನವರ, ಅಂಕುಶ ಜಾಧವ, ಅರುಣ ಐಹೊಳೆ, ಸದಾಶಿವ ಘೋರೆ​‍್ಡ ಸೇರಿದಂತೆ ಅನೇಕರು ಇದ್ದರು. 


ಸುದ್ದಿ ಓದಿ