ಮುಂದಗೋಡ

ಗ್ರಾಮೀಣ ಬಡ ಕೂಲಿ ಕಾರ್ಮಿಕರಿಗೆ ವರದಾನ VB–G–RAM–G

ಗ್ರಾಮೀಣ ಬಡ ಕೂಲಿ ಕಾರ್ಮಿಕರಿಗೆ ವರದಾನ VB–G–RAM–G

ಮುಂಡಗೋಡದಲ್ಲಿ ಭಾಜಪ ಜಾಗೃತಿ ಸಮಾವೇಶ  

ಮುಂಡಗೋಡ 08: ಭಾರತೀಯ ಜನತಾ ಪಕ್ಷದ ಮುಂಡಗೋಡ ಮಂಡಲದ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ VB–G–RAM–G ಯೋಜನೆ ಕುರಿತು ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.  

ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ VB–G–RAM–G ಕಾಯ್ದೆಯನ್ನು ಜಾರಿಗೆ ತಂದಿರುವುದು ಅತ್ಯಂತ ಸ್ವಾಗತಾರ್ಹವಾಗಿದ್ದು, ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ನೇರ ಲಾಭ ದೊರೆಯಲಿದೆ ಎಂದು ವಕ್ತಾರರು ಹೇಳಿದರು. ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು. ಇಂತಹ ಜನಪರ ಯೋಜನೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಅವರು ಟೀಕಿಸಿದರು.  

ಕಾರ್ಯಕ್ರಮದಲ್ಲಿ ಬಿಜೆಪಿ ಮುಂಡಗೋಡ ಮಂಡಲದ ಅಧ್ಯಕ್ಷರಾದ ಮಂಜುನಾಥ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ ಸಿದ್ಧಿ, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾದ ಎಂ.ಜಿ. ಭಟ್, ಜಿಲ್ಲಾ ಉಪಾಧ್ಯಕ್ಷರಾದ ಎಲ್‌.ಟಿ. ಪಾಟೀಲ ಹಾಗೂ ಅಶೋಕ ಚಲವಾದಿ, ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯದರ್ಶಿಗಳಾದ ಸಂತೋಷ್ ತಳವಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 


ಸುದ್ದಿ ಓದಿ