ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಧರಣಿ ಆರಂಭ
ಕಾರವರ 18: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಆರಂಭವಾಯಿತು. ಮೊದಲ ದಿನ ಯಲ್ಲಾಪುರ ಬಿಜೆಪಿ ಘಟಕದಿಂದ ಧರಣಿ ನಡೆಯುತ್ತಿದ್ದ ಎಲ್ .ಟಿ.ಪಾಟೀಲ್ ಧರಣಿ ನೇತೃತ್ವ ವಹಿಸಿದ್ದರು. ಕಾರವಾರ ನಗರಸಭೆಯ ಮಾಜಿ ಸದಸ್ಯರು ಸಹ ಧರಣಿಯಲ್ಲಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಮುಖಂಡರು , ನಿರಾಪರಾಧಿಯಾಗದ ನಾಗೇಂದ್ರ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಂಡದ್ದು ತಪ್ಪು. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡದ ಹೊರತು ಧರಣಿ ನಿಲ್ಲಿಸುವುದಿಲ್ಲ. ಅ.24 ರತನಕ ಪ್ರತಿ ವಿಧಾನಸಭಾ ವಾರು ಕಾರ್ಯಕರ್ತರು ಧರಣಿ ನಡೆಸುತ್ತೇವೆ ಎಂದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಬಿಗಿ ಬಂದೊಬಸ್ತ ಏರಿ್ಡಸಿದ್ದರು. ಬಿಜೆಪಿ ಕಾರ್ಯಕರ್ತರು ಧರಣಿ ಸ್ಥಳದಲ್ಲೇ ಅಡುಗೆ ತರಿಸಿ ಊಟ ಮಾಡಿದರು. ಬಿಜೆಪಿ ಉತ್ತರ ಕನ್ನಡ ಜಿಲ್ಲೆಯ ವತಿಯಿಂದ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ನಾಳೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು , ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಲಿದ್ದಾರೆಂದು ಬಿಜೆಪಿ ಮಾಧ್ಯಮ ವಕ್ತಾರ ಕಿಶನ್ ಕಾಂಬಳೆ ತಿಳಿಸಿದರು.