ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕ್ರಮ ಖಂಡಿಸಿ ಬಿಜೆಪಿ
BJP condemns the move to issue permanent residence certificates to illegal immigrants
ಲೋಕದರ್ಶನ ವರದಿ
ಕಾರವಾರ 13 : ರಾಜ್ಯ ಸರ್ಕಾರ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಹೊರಟಿರುವುದನ್ನು ಜಿಲ್ಲಾ ಬಿಜೆಪಿ ಬಲವಾಗಿ ಖಂಡಿಸಿತು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಜನರನ್ನು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ಕುತಂತ್ರ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಸೇರಿದಂತೆ ಬಿಜೆಪಿ ಹಾಲಿ , ಮಾಜಿ ಶಾಸಕರು ಜಂಟಿಯಾಗಿ ಆರೋಪಿಸಿದರು.ಕಾರವಾರದ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಮಾಡಿದ ಅವರು ಕಂದಾಯ ನೀರೀಕ್ಷಕರ ಮೂಲಕ ಇಂತಹ ಪ್ರಮಾಣಪತ್ರ ನೀಡಲು ಹೊರಟಿರುವುದು ಸಂವಿಧಾನ ಬಾಹಿರವಾಗಿದೆ.
ಈ ಕೆಲಸ ದೇಶದ ಭದ್ರತೆಗೆ ದೊಡ್ಡ ಅಪಾಯವನ್ನು ಸೃಷ್ಟಿಸಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ಎಸ್.ಹೆಗಡೆ ಅಪಾದಿಸಿದರು ಇದರಿಂದ ರಾಜ್ಯದಲ್ಲಿ ಉದ್ಯೋಗ, ಪಡಿತರ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಸಿಗಬೇಕಾದ ಸೌಲಭ್ಯಗಳು ವಂಚಿತವಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳ ತಂಡವು ಈ ಅಧಿಸೂಚನೆಯನ್ನು ತಕ್ಷಣವೇ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಮತ್ತು ಕೇಂದ್ರ ಗೃಹ ಇಲಾಖೆಗೆ ಆಗ್ರಹಪೂರ್ವಕ ಮನವಿ ಸಲ್ಲಿಸಲು ನಿರ್ಧರಿಸಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 