ಸಿಂಧಗಿ

ನಗರದ 23 ವಾರ್ಡ್ಗಳ ಸ್ವಚ್ಛತೆಗೆ ಬಿಜೆಪಿ ಆಗ್ರಹ..! ಸಿಂದಗಿ ನಗರಸಭೆಗೆ ಮುತ್ತಿಗೆ ಹಾಕಿ ಮನವಿ

ನಗರದ 23 ವಾರ್ಡ್ಗಳ ಸ್ವಚ್ಛತೆಗೆ ಬಿಜೆಪಿ ಆಗ್ರಹ..! ಸಿಂದಗಿ ನಗರಸಭೆಗೆ ಮುತ್ತಿಗೆ ಹಾಕಿ ಮನವಿ
BJP demands cleanliness in the city's 23 wards; lays siege to Sindagi City Municipal Council and su

               ಸಿಂದಗಿ 26 : ನಗರದ 23 ವಾರ್ಡ್ಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು, ಒಳಚರಂಡಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಹಾಗೂ ಕುಡಿಯುವ ನೀರು ಮತ್ತು ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಸಿಂದಗಿ ನಗರ ಘಟಕದ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

              ನಗರದ ಸ್ವಾಮಿ ವಿವೇಕಾನಂದ ವೃತ್ತದಿಂದ ಜಗದ್ಗುರು ಡಾ ತೊಂಟದ ಸಿದ್ದಲಿಂಗ ಮಹಾಸ್ವಾಮಿಗಳ ರಸ್ತೆ ಮಾರ್ಗವಾಗಿ ಪ್ರತಿಭಟನೆ ನಡೆಸಿ ನಂತರ ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ ಅವರಿಗೆ ಮನವಿ ಸಲ್ಲಿಸಿದರು . ನಗರ ಘಟಕದ ಅಧ್ಯಕ್ಷ ಪ್ರಶಾಂತ ನಂದಿಕೋಲ ಮಾತನಾಡಿ ನಗರದ ವಿವಿಧ ವಾರ್ಡ್ಗಳಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿ ಸಮರ​‍್ಕವಾಗಿ ನಡೆಸದ ಕಾರಣ                        ಚರಂಡಿಗಳ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಕ್ಕೋಳಗಾಗಿನಗರದ ಸ್ವಚ್ಛತೆ ಕಾಪಾಡುವುದು ನಗರ ಸಭೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತ್ತಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿ, ಚರಂಡಿ ಸ್ವಚ್ಛತೆ ಹಾಗೂ ಅಗತ್ಯ ನಿರ್ವಹಣಾ ಕಾರ್ಯಗಳನ್ನು ನಿಯಮಿತವಾಗಿ ಕೈಗೊಳ್ಳಬೇಕು.

                  ಕೇವಲ ಮನವಿ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ಸ್ಥಳ ಪರೀಶೀಲನೆ ನಡೆಸಿ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ ನಗರದ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ನಿರ್ವಹಣೆಯಲ್ಲಿ ನಗರಸಭೆ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

                  ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಸಿದ್ದು ಬುಳ್ಳಾ ಮಾತನಾಡಿ, ವಾರ್ಡ್ಗಳಲ್ಲಿ ಕಸ ವಿಲೇವಾರಿ ಮತ್ತು ಒಳಚರಂಡಿ ನಿರ್ವಹಣೆಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ನಿಯಮಿತ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ನೀಲಮ್ಮ ಯಡ್ರಾಮಿ ಮಾತನಾಡಿ, ಸ್ವಚ್ಛತೆ ಒಂದು ಪ್ರದೇಶಕ್ಕೆ ಸೀಮಿತವಾಗದೆ ನಗರದ ಎಲ್ಲ ವಾರ್ಡ್ಗಳಲ್ಲಿಯೂ ಸಮರ​‍್ಕವಾಗಿ ನಡೆಯಬೇಕು..

                      ಜನರ ಆರೋಗ್ಯ ಮತ್ತು ಅನುಕೂಲಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.  ಜಿಲ್ಲಾ ಉಪಾಧ್ಯಕ್ಷೆ ಶಿಲ್ಪಾ ಕುದುರಗೊಂಡ ಹಾಗೂ ಪ್ರಶಾಂತ್ ಗದ್ದರಕಿ, ಪರಶುರಾಮ ಗೂಳೂರ ಸೇರಿದಂತೆ ಇತರರು ಮಾತನಾಡಿದರು. ನಗರಸಭೆ ಎದುರು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಂದಾಳ ಕ್ರಾಸ್ನ ಮುಖ್ಯ ರಸ್ತೆಯನ್ನು ಅಗೆದು ಹಲವು ದಿನಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಬಿಜೆಪಿ ಪಕ್ಷದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

                 

ಸುದ್ದಿ ಓದಿ