ಬೆಳಗಾವಿ

ಬರಪೀಡಿತ ತಾಲೂಕು ಎಂದು ಘೋಷಿಸಲು ಬಿಜೆಪಿ ಆಗ್ರಹ

ಬರಪೀಡಿತ ತಾಲೂಕು ಎಂದು ಘೋಷಿಸಲು ಬಿಜೆಪಿ ಆಗ್ರಹ


ಸವದತ್ತಿ 30:  ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸವದತ್ತಿ ತಾಲೂಕನ್ನು ಕೂಡಲೇ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ಸೂಕ್ತ ಬೆಳೆ ನಷ್ಟ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಸವದತ್ತಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.  

ಈ ಸಂದರ್ಭದಲ್ಲಿ ಮಾತನಾಡಿದ ವಿರೂಪಾಕ್ಷ ಮಾಮನಿ, ತಾಲೂಕಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬರಪೀಡಿತ ತಾಲೂಕು ಎಂದು ಘೋಷಿಸಲು ವಿಳಂಬದ ಧೋರಣೆ ಮುಂದುವರಿಸಿದರೆ, ರೈತರ ಹಿತರಕ್ಷಣೆಗೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಉಗ್ರ ಹೋರಾಟ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.  

ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ಬೆಳೆ ನಷ್ಟವನ್ನು ಸಮರ​‍್ಕವಾಗಿ ಅಂದಾಜಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.  

ಈ ಸಂದರ್ಭದಲ್ಲಿ ಶಶಿಕುಮಾರ ಗುತ್ಹಣ್ಣವರ, ಮಂಜುನಾಥ ಪಮಾರ, ಈರಣ್ಣ ಚಂದ್ರಗಿ, ಗೌಡಪ್ಪ ಸವದತ್ತಿ, ಮಹಾಂತೇಶ ಗೋಡಿ, ಮಲ್ಲೇಶ ಸುಳೇಭಾವಿ, ಮಹಾದೇವ ಮುರಗೋಡ, ಮಾರುತಿ ಅಪ್ಪಣ್ಣವರ, ಪುಂಡಲೀಕ ಮಾದರ, ದೊಡ್ಡಕಲ್ಲೋಳಪ್ಪ ನರ್ತಿ, ಕೃಷ್ಣಮೂರ್ತಿ ತೊರಗಲ್, ಚೇತನ ಜಕಾತಿ, ಬಸವರಾಜ ಸಾಲಿಮಠ, ವೀರು ಗುಡಣ್ಣವರ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ