ಬರಪೀಡಿತ ತಾಲೂಕು ಘೋಷಣೆ ಗೆ ಬಿಜೆಪಿ ಆಗ್ರಹ
BJP demands declaration of drought-hit taluk
ಲೋಕದರ್ಶನ ವರದಿ
ಹೂವಿನಹಡಗಲಿ 10- ಹೂವಿನಹಡಗಲಿ ಬರಪೀಡಿತ ತಾಲೂಕು ಘೋಷಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬಿಜೆಪಿ ತಾಲೂಕು ಘಟಕದಿಂದ ಶಾಸಕ ಕೃಷ್ಣನಾಯಕ ನೇತೃತ್ವದಲ್ಲಿ ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರ ಕೆ.ಎಂಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಕೃಷ್ಣನಾಯಕ ಮಾತನಾಡಿ ಮಳೆ ಕೊರತೆಯಿಂದ ಹಾನಿಯಾಗಿರುವ ಕೃಷಿ ಬೆಳೆಗಳಿಗೆ ಸೂಕ್ತ ಪರಿಹಾರ ಎಕರೆಗೆ ? 50 ಸಾವಿರ ರೂ. ಬರ ಪೀಡಿತ ತಾಲೂಕು ಘೋಷಣೆ ಜತೆಗೆ ಸಂಕಷ್ಟದಲ್ಲಿರುವ ರೈತರ ಬೆಳೆಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ಮಂಡಲ ಅಧ್ಯಕ್ಷ ಪೂಜಾರ್ ಮಲ್ಲಿಕಾರ್ಜುನ್ , ಜಿಲ್ಲಾಧ್ಯಕ್ಷ ಎಸ್ ಸಂಜೀವ್ ರೆಡ್ಡಿ, ಮಾಜಿ ಶಾಸಕರ ನಂದಿಹಳ್ಳಿ ಹಾಲಪ್ಪ ಮಾತನಾಡಿ ಕೂಡಲೇ ಬರಪೀಡಿತ ತಾಲೂಕು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರವನ್ನು ಕೊಡಬೇಕು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಈಟಿ ಲಿಂಗರಾಜ್, ಜಿಲ್ಲಾಧ್ಯಕ್ಷೆ ಮೀರಬಾಯಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 