ಖರ್ಗೆ ಮೇಲೆ ಕಾನೂನು ಕ್ರಮ ಭಾಜಪ ಆಗ್ರಹ
BJP demands legal action against Kharge
ಶಿಗ್ಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಭಾಷಣ ಖಂಡಿಸಿ, ಅವರ ವಿರುದ್ಧ ಕಾನೂನು ಪ್ರಕಾರ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ತಾಲೂಕು ಯುವ ಬಿಜೆಪಿ ಮೋರ್ಚಾ ಪದಾಧಿಕಾರಿಗಳು ಸ್ಥಳೀಯ ಪೊಲೀಸ್ ಅಧಿಕಾರಿಗೆ ಮನವಿ ಸಲ್ಲಿಸಿದರು. ಯುವ ಘಟಕದ ಅಧ್ಯಕ್ಷ ಅನೀಲ ಸಾತಣ್ಣವರ ನೇತೃತ್ವದಲ್ಲಿ ಪದಾಧಿಕಾರಿಗಳು ಖರ್ಗೆ ಅವರು ಅತ್ಯಂತ ಜವಾಬ್ದಾರಿ ಹೊಂದಿದ್ದು, ಅಲ್ಪಸಂಖ್ಯಾತರ ಓಲೈಕೆಯನ್ನು ಸದಾ ಮಾಡುತಿರುತ್ತಾರೆ. ಇಂತಹ ವ್ಯಕ್ತಿಯ ಪ್ರಚೋದನಾಕಾರಿ ಭಾಷಣ ದೇಶದಲ್ಲಿರುವ ಲಕ್ಷಾಂತರ ಬಿಜೆಪಿ ಮತ್ತು ಆರೆಸ್ಸೆಸ್ ಸದಸ್ಯರ ಜೀವಕ್ಕೆ ಅಪಾಯವೊಡ್ಡಿದೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳದಿದ್ದರೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಉಗ್ರ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ, ಯುವ ಘಟಕದ ಮುಖಂಡ ವಿವೇಕ ರಾಮಗೇರಿ, ಸಚಿನ ಮಡಿವಾಳರ, ಸತೀಶ ಬಾಣದ, ರೇಣುಕು ಗೌಡ ಪಾಟೀಲ, ಸೇರಿದಂತೆ ಇತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 