ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಲೋಕದರ್ಶನ ವರದಿ
ವಿಜಯಪುರ .18: ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿಜಯಪುರ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಆರಂಭವಾದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ನಿರಂತರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಾಗೇಂದ್ರ ಅವರು ?175 ಕೋಟಿ ಅವ್ಯವಹಾರ ನಡೆಸಿರುವುದಾಗಿ ಆರೋಪಿಸಿ, ಇದೀಗ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ವಾಲ್ಮೀಕಿ ನಿಗಮದ ಅನುದಾನ ದುರ್ಬಳಕೆ ಮಾಡಿದ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ ಅವರು, ನಾಗೇಂದ್ರ ರಾಜೀನಾಮೆ ನೀಡುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದರು.