ಕಾಗವಾಡ

ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿ ನಾಯಕರ ಸಹಕಾರ

ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿ ನಾಯಕರ ಸಹಕಾರ

ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ  

ಕಾಗವಾಡ 11: ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳ ಅಂತರದಲ್ಲಿಯೇ ಜಯ ಸಾಧಿಸಲಿದ್ದಾರೆ ಎಂದು ಕಾಗವಾಡ ಮತಕ್ಷೇತ್ರ ಮಾಜಿ ಶಾಸಕ ರಾಜು ಕಾಗೆ ವಿಶ್ವಾಸ ವ್ಯಕ್ತ ಪಡಿಸಿದರು. 

ಶುಕ್ರವಾರ ದಿ 10 ರಂದು ವಿಧಾನ ಪರಿಷತ್ ಚುನಾವಣೆಯ ದಿನವಾದ ಇಂದು ಕ್ಷೇತ್ರ ಸುತ್ತಾಡಿ ಬಂದಿದ್ದೇನೆ. ಕ್ಷೇತ್ರದ ಜನರ ನಾಡಿ ಮಿಡಿತ ಬಲ್ಲಿದ್ದೇನೆ. ಗ್ರಾಮ ಪಂಚಾಯತ್ ಸದಸ್ಯರ ಒಲುವು ನಮ್ಮತ್ತ ಇರುವದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಂದರು. 

ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹೆಚ್ಚಿದ್ದರೂ ಕೂಡ ಅವರಲ್ಲಿ ಹಂಚಿ ಹೋಗಿರುವದರಿಂದ ಅದರ ಲಾಭ ಕಾಂಗ್ರೆಸ್ಸಿಗೆ ಆಗಲಿದೆ, ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. 

 ಜಿಲ್ಲೆಯಲ್ಲಿ ಬಹುತೇಕ ಬಿಜೆಪಿ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಯವರಿಗೆ ತೆರೆಮರೆಯಲ್ಲಿ ಸಹಕಾರ ನೀಡಿರುವುದರಿಂದಲೇ ಇಷ್ಟು ಆತ್ಮವಿಶ್ವಾಸದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ವಿತ ಎಂದು ಹೇಳುತ್ತಿದ್ದೇನೆ ಎಂದು ಮಾಜಿ ಶಾಸಕ ರಾಜು ಕಾಗೆ ಹೊಸ ಬ್ವಾಂಬ್ ಸಿಡಿಸಿದರು. 

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದರ ಮೂಲಕ ಮೇಲ್ಮನೆಯಲ್ಲಿ ಕಾಂಗ್ರೆಸ್  ತನ್ನ ಅಸ್ತಿತ್ವವನ್ನು ಕಾಯ್ದುಕೊಳ್ಳಲಿದೆ ಎಂದು ಕಾಗೆ ವಿಶ್ವಾಸ ವ್ಯಕ್ತ ಪಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಜಿಲ್ಲೆಯಲ್ಲಿ ಎಲ್ಲ ಜನಪ್ರತಿನಿಧಿಗಳು ಶಾಸಕರು ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ, ಹಾಗಾಗಿ ಚನ್ನರಾಜ ಹಟ್ಟಿಹೊಳಿ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆಂದು ರಾಜು ಕಾಗೆ ವಿಶ್ವಾಸ ವ್ಯಕ್ತ ಪಡಿಸಿದರು. 

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ಅಕಿವಾಟೆ, ಮುಖಂಡರಾದ ದಿಗ್ವಿಜಯಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಗಜಾನನ ಯರಂಡೋಲಿ, ರಾಜು ಮದನೆ, ಉಮೇಶಗೌಡ ಪಾಟೀಲ, ಬಿ,ಎಸ್‌.ಪಾಟೀಲ(ಬಮ್ನಾಳ), ಗುಳಪ್ಪ ಜತ್ತಿ, ಕುಮಾರ ಪಾಟೀಲ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 


ಸುದ್ದಿ ಓದಿ