ಆಳಮೇಲದಲ್ಲಿ ಬಿಜೆಪಿ ಸಂಘಟನಾ ಸಭೆ
BJP organizational meeting at Aalamela
ಆಳಮೇಲ 29: ನಗರದ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದುಕೊಂಡು ಪಕ್ಷ ಸಂಘಟನೆ ಬಲಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ್ ನಂಬಳ ಹೇಳಿದರು.
ಶನಿವಾರ ಪಟ್ಟಣದ ಅಳೊಳ್ಳಿ ಮಠದಲ್ಲಿ ನಡೆದ ಬಿಜೆಪಿ ಸಂಘಟನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂಲ ಬಿಜೆಪಿ ಕಾರ್ಯಕರ್ತರ ಅಸಮಾಧಾನಗಳನ್ನು ಚರ್ಚಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದಾಗಿ ತಿಳಿಸಿದರು.
ಮಾಜಿ ಶಾಸಕ ರಮೇಶ್ ಭೂಸನೂರ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಕಾರ್ಯಕರ್ತರ ಪಕ್ಷನಿಷ್ಠೆ ಮತ್ತು ಶ್ರಮ ಅಗತ್ಯ. ಪಕ್ಷ ಮತ್ತಷ್ಟು ಬಲಿಷ್ಠವಾಗಬೇಕಾದರೆ ಕಾರ್ಯಕರ್ತರು ಆಂತರಿಕ ಸಮಸ್ಯೆಗಳನ್ನು ಬದಿಗಿಟ್ಟು ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದರು.
ತಮ್ಮ ಅಧಿಕಾರಾವಧಿಯಲ್ಲಿ ಆಳಮೇಲ ಪಟ್ಟಣದ ಜನರಿಗೆ ಹಲವು ಸೌಲಭ್ಯಗಳನ್ನು ಒದಗಿಸಿರುವುದಾಗಿ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು.
ಸಭೆಯಲ್ಲಿ ಎಸ್ಐಆರ್ ಕುರಿತು ಮಾತನಾಡಿದ ಬಿಜೆಪಿ ಮುಖಂಡ ಗುರು ತಳವಾರ, ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಕಲಿ ಹಾಗೂ ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಿ, ಅಗತ್ಯ ದಾಖಲೆಗಳೊಂದಿಗೆ ಮರು ಸೇರೆ್ಡ ಹಾಗೂ ಪಟ್ಟಿಯಿಂದ ಹೆಸರು ತೆರವುಗೊಳಿಸುವ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ ಜೋಗುರ, ಈರಣ್ಣ ರಾವೂರ, ದಯಾನಂದ ಚಲವಾದಿ, ಪ್ರಭುಗೌಡ ಪಾಟೀಲ್, ಸಿದ್ದರಾಮ ಆನಗೊಂದ, ಶ್ರೀಮಂತ ನಾಗೂರ, ದೇವಪ್ಪ ಗುಣಾರಿ, ಬಾಬುಗೌಡ ಬಿರಾದಾರ ಸೇರಿದಂತೆ ಗುರು ತಳವಾರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 