ಆಲಮೇಲದಲ್ಲಿ ಬಿಜೆಪಿ ಸಂಘಟನಾ ಸಭೆ
BJP organizational meeting in Alamel
ಲೋಕದರ್ಶನ ವರದಿ
ಆಲಮೇಲ 29: ನಗರದ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ನಂಬಳ ಹೇಳಿದರು.
ಪಟ್ಟಣದ ಅಳ್ಳೋಳ್ಳಿ ಮಠದಲ್ಲಿ ಶನಿವಾರ ನಡೆದ ಬಿಜೆಪಿ ಸಂಘಟನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂಲ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನವಿದ್ದರೆ ಅವರೊಂದಿಗೆ ಚರ್ಚಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವುದಾಗಿ ತಿಳಿಸಿದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು, ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪಕ್ಷನಿಷ್ಠೆ ಹಾಗೂ ಶ್ರಮ ಅಗತ್ಯ ಎಂದರು. ಆಂತರಿಕ ಸಮಸ್ಯೆಗಳನ್ನು ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು.
ತಮ್ಮ ಅಧಿಕಾರಾವಧಿಯಲ್ಲಿ ಆಲಮೇಲ ಪಟ್ಟಣದವರಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಪಕ್ಷ ಸಂಘಟನೆ ಮಾಡುವುದಾಗಿ ಹೇಳಿದರು.
ಎಸ್‌ಐಆರ್ ಕುರಿತು ಬಿಜೆಪಿ ಮತ ಪರೀಶೀಲನಾ ಮುಖ್ಯಸ್ಥ ಗುರು ತಳವಾರ ಮಾತನಾಡಿ, ಸಿಂದಗಿ ಮತಕ್ಷೇತ್ರದಲ್ಲಿ 2.50 ಲಕ್ಷ ಮತದಾರರಿದ್ದು, ಈ ಪೈಕಿ 32,290 ಮತಗಳನ್ನು ಪಟ್ಟಿಯಿಂದ ಡೀಲೀಟ್ ಮಾಡಲಾಗಿದೆ. ಆಲಮೇಲ ನಗರದಲ್ಲಿ 2,966, ಸಿಂದಗಿ ನಗರದಲ್ಲಿ 9,020 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸುಮಾರು 20 ಸಾವಿರ ಮತಗಳು ಡೀಲೀಟ್ ಆಗಿವೆ ಎಂದು ತಿಳಿಸಿದರು.
ಜವಾದ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡಲಾಗಿದ್ದರೆ ಬಿಜೆಪಿ ಕಾರ್ಯಕರ್ತರು ದಾಖಲೆಗಳೊಂದಿಗೆ ಪರೀಶೀಲಿಸಿ ಮರು ಸೇರೆ್ಡಗೆ ಕ್ರಮ ಕೈಗೊಳ್ಳಬೇಕು. ಕ್ಷೇತ್ರ, ವಾರ್ಡ್ ಅಥವಾ ಗ್ರಾಮದ ವ್ಯಾಪ್ತಿಗೆ ಸೇರದವರ ಹೆಸರುಗಳನ್ನು ಗುರುತಿಸಿ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ ಜೋಗುರ, ಈರಣ್ಣ ರಾವೂರ, ಚಿದಾನಂದ ಚಲವಾದಿ, ಪ್ರಭುಗೌಡ ಪಾಟೀಲ, ಸಿದ್ದರಾಮ ಆನಗೊಂಡ, ಶ್ರೀಮಂತ ನಾಗುರ, ದೇವಪ್ಪ ಗುಣಾರಿ, ಬಾಬುಗೌಡ ಬಿರಾದಾರ ಹಾಗೂ ಗುರು ತಳವಾರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 