ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಯಲಬುರ್ಗಾ 20: ರೈತರಿಗೆ ಏಳು ತಾಸು ವಿದ್ಯುತ್ ಕಡಿತಗೊಳಿಸಿ ಕೇವಲ ಐದು ತಾಸು ರಾತ್ರಿ ವೇಳೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು. 

ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ವೃತ್ತದ ಬಳಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ  ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಹೋರಾಟದ ನೇತೃತ್ವವನ್ನು ಮಾಜಿ ಸಚಿವ ಹಾಲಪ್ಪ ಆಚಾರ ಅವರು ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಬಳಿಕ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 7 ತಾಸು ವಿದ್ಯುತ್ ನೀಡಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳಲ್ಲಿ ವಿದ್ಯುತ್ ಕಡಿತ ಮಾಡಿ 5 ತಾಸು ರಾತ್ರಿ ವೇಳೆ ಕೊಡುತ್ತಿರುವುದು ಯಾವ ನ್ಯಾಯ? ಇದು ರೈತರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದೆ. ಇಂತಹ ಭ್ರಷ್ಟ ಸರ್ಕಾರದ ವಿರುದ್ಧ ರಾಜ್ಯದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮನೆಯಲ್ಲಿ 242 ಕೋಟಿ, 240 ಕೋಟಿ ನಗದು ಐಟಿ ದಾಳಿಯಲ್ಲಿ ಸಿಕ್ಕಿದೆ. ರಾಜ್ಯ ಸರ್ಕಾರದ ಕಮಿಷನ್ ಹಣ ಇದಾಗಿದೆ. ನನ ಅಧಿಕಾರಾವಧಿಯಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಿ ತಾಲೂಕನ್ನು ಅಭಿವೃದ್ಧಿಗೊಳಿಸಿದ್ದೇನೆ. ಈಗಿನ ಶಾಸಕ ರಾಯರಡ್ಡಿಯವರು ಯಾವ ಅಭಿವೃದ್ಧಿ ಕಾರ್ಯಕೈಗೊಳ್ಳುತ್ತಿಲ್ಲ. ಕೇವಲ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಇದರಿಂದ ಜನರು ಕಂಗಲಾಗಿದ್ದಾರೆ ಎಂದು ಆರೋಪಿಸಿದರು.ಈ ವೇಳೆ ಬಿಜೆಪಿ ಪ್ರಮುಖರಾದ ಬಸವಲಿಂಗಪ್ಪ ಭೂತೆ, ಸಿ.ಎಚ್‌.ಪಾಟೀಲ, ಅರವಿಂದಗೌಡ ಪಾಟೀಲ, ಕಳಕಪ್ಪ ಕಂಬಳಿ, ಶಿವಶಂಕರಾವ್ ದೇಸಾಯಿ, ನವೀನಕುಮಾರ ಗುಳಗಣ್ಣನವರ್, ಶರಣಪ್ಪ ಈಳಿಗೇರ, ಅಯ್ಯನಗೌಡ ಕೆಂಚಮ್ಮನವರ್, ಅಮರೇಶ ಹುಬ್ಬಳ್ಳಿ, ಕಳಕಪ್ಪ ತಳವಾರ, ಬಸನಗೌಡ ತೊಂಡಿಹಾಳ, ಶಕುಂತಲಾದೇವಿ ಪಾಟೀಲ, ವಸಂತ ಭಾವಿಮನಿ, ಶಿವಕುಮಾರ ನಾಗಲಾಪೂರಮಠ, ಸಿದ್ರಾಮೇಶ ಬೇಲೇರಿ, ರತನ್ ದೇಸಾಯಿ, ಶಂಕರ ಭಾವಿಮನಿ, ಸೇರಿ ಪಕ್ಷದ ಕಾರ್ಯಕರ್ತರು ಇದ್ದರು.