ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
BJP protests demanding Minister Nagendra's resignation
ಬೀದರ್ 20: ವಾಲ್ಮೀಕಿ ನಿಗಮದ 187 ಕೋಟಿ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರೆ್ಡ ಮಾಡಿರುವುದನ್ನು ಖಂಡಿಸಿ ಬಿಜೆಪಿ ಬೀದರ್ ದಕ್ಷಿಣ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ನಿರಂತರ ಧರಣಿ ಸತ್ಯಾಗ್ರಹ ಹಾಗೂ ಪ್ರತಿಭಟನೆ ನಡೆಯಿತು.
ನಗರದ ಉಸ್ತುವಾರಿ ಸಚಿವರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಗಂಭೀರವಾಗಿದ್ದು, ಸಾರ್ವಜನಿಕರ ಹಣ ದುರ್ಬಳಕೆಯ ಆರೋಪಗಳಿವೆ. ಇಂತಹ ಪ್ರಕರಣದಲ್ಲಿ ರಾಜೀನಾಮೆ ನೀಡಿದ್ದ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರೆ್ಡ ಮಾಡಿರುವುದು ಸರ್ಕಾರದ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ ಎಂದರು.
ಹಗರಣದ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರ ಹಣವನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ಗುರುನಾಥ ರಾಜಗೀರ್ ಮಾತನಾಡಿ, ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 