ಬಾಗಲಕೋಟೆ

ವಂದೇ ಮಾತರಂ ಗೀತೆಯ ಪೂರ್ಣರೂಪಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ವಂದೇ ಮಾತರಂ ಗೀತೆಯ ಪೂರ್ಣರೂಪಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಲೋಕದರ್ಶನ ವರದಿ 

  ಬೀಳಗಿ 19 : ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬೀಳಗಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.  

ಡಾ. ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್‌.ಆರ್‌. ನಿರಾಣಿ ಮಾತನಾಡಿ, ವಂದೇ ಮಾತರಂ ಗೀತೆಯ ಪೂರ್ಣರೂಪವನ್ನು ಗೌರವಪೂರ್ವಕವಾಗಿ ಹಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಗೀತೆಯು ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರೀಯ ಭಾವನೆಯೊಂದಿಗೆ ಐತಿಹಾಸಿಕವಾಗಿ ಸಂಬಂಧ ಹೊಂದಿದೆ ಎಂದು ಹೇಳಿದರು.  

ತಾಲೂಕು ಬಿಜೆಪಿ ಅಧ್ಯಕ್ಷ ಎಚ್‌.ಜಿ. ಬಾಳಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ಕ್ರಮವನ್ನು ವಿರೋಧಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 


ಸುದ್ದಿ ಓದಿ