ಅ.7ರಂದು ಬೆಳಗಾವಿಯಲ್ಲಿ ಬಿಜೆಪಿಯ ‘ಸೇವಾ ಜ್ಯೋತಿ ಯಾತ್ರೆ’
ಬೆಳಗಾವಿ 05 : ನಗರದ ಧರ್ಮನಾಥ ಭವನದ ಹತ್ತಿರವಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೇವಾ ಜ್ಯೋತಿ ಯಾತ್ರೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಭಾಗ ಪ್ರಭಾರಿ ಸಂಜಯ ಪಾಟೀಲ, ಶಾಸಕ ವಿಠ್ಠಲ ಹಲಗೇಕರ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಇದೇ ಅಕ್ಟೋಬರ್ 7 ರಂದು 25ವರ್ಷ ಪೂರ್ಣಗೊಳ್ಳುವ ಪ್ರಯುಕ್ತ ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್ ಸೇವಾ ಜ್ಯೋತಿ ಯಾತ್ರೆ ನಡೆಯಲಿದ್ದು ಬೆಳಗಾವಿ ಗ್ರಾಮಾಂತರ, ಮಹಾನಗರ, ಚಿಕ್ಕೋಡಿ ಜಿಲ್ಲೆಗಳ ಎಲ್ಲಾ ತಾಲೂಕುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಮೋದಿಜಿ ಅಭಿಮಾನಿಗಳು, ಪಕ್ಷದ,ಹಿಂದೂಪರ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಡಾ.ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ರಾಜೇಂದ್ರ ಗೌಡಪ್ಪಗೋಳ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಕೋಶಾಧ್ಯಕ್ಷ ಸಂತೋಷ ದೇಶನೂರ, ಪ್ರವೀಣ್ ಮಾಳೇದರ, ಮಂಜುನಾಥ ಅಷ್ಠಗಿ ಹಾಗೂ ಇತರರಿದ್ದರು.