ಕೊಪ್ಪಳ

ಬೆಲೆ ಏರಿಕೆ ವಿರುದ್ಧ ಯಲಬುರ್ಗಾದಲ್ಲಿ ಬಿಜೆಪಿ ರಣಕಹಳೆ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಾವಿರಾರು ಕಾರ್ಯಕರ್ತರಿಂದ ಪ್ರತಿಭಟನೆ ಹಿ ರಾಜ್ಯಪಾಲರಿಗೆ ಮನವಿ

ಬೆಲೆ ಏರಿಕೆ ವಿರುದ್ಧ ಯಲಬುರ್ಗಾದಲ್ಲಿ ಬಿಜೆಪಿ ರಣಕಹಳೆ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಾವಿರಾರು ಕಾರ್ಯಕರ್ತರಿಂದ ಪ್ರತಿಭಟನೆ ಹಿ ರಾಜ್ಯಪಾಲರಿಗೆ ಮನವಿ
BJP sounds the battle cry in Yelburga against price hikes; thousands of party workers protest agains


          ಯಲಬುರ್ಗಾ 23:  ರಾಜ್ಯದಲ್ಲಿ ಹಾಲಿನ ದರ, ಬಸ್ ಪ್ರಯಾಣ ದರ ಹಾಗೂ ವಾಹನ ನೋಂದಣಿ ಶುಲ್ಕ ಸೇರಿದಂತೆ ವಿವಿಧ ಸೇವೆಗಳ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ವತಿಯಿಂದ ಯಲಬುರ್ಗಾ ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

         ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಕನಕದಾಸ ವೃತ್ತ, ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತ ಹಾಗೂ ಪುನೀತ್ ರಾಜ್ಕುಮಾರ್ ವೃತ್ತದ ಮೂಲಕ ಸಾಗಿದ ಮೆರವಣಿಗೆ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡಿತು.

              ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಸರ್ಕಾರದ ಬೆಲೆ ಏರಿಕೆ ನೀತಿಯನ್ನು ತೀವ್ರವಾಗಿ ಖಂಡಿಸಿ, ಜನಸಾಮಾನ್ಯರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ, ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ,

             ತಾಲೂಕು ಅಧ್ಯಕ್ಷ ಮಾರುತಿ ಗಾವರಾಳ, ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ಗುಳಗುಳಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್‌. ಪೊಲೀಸ್ ಪಾಟೀಲ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶರಣಪ್ಪ ಈಳಿಗೇರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಯ್ಯನಗೌಡ ಕೆಂಚಮ್ಮನವರ, ಅಮರೇಶ ಹುಬ್ಬಳ್ಳಿ, ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ,

             ಮಹಿಳಾ ಘಟಕದ ಅಧ್ಯಕ್ಷೆ ಸಂತೋಷಿಮಾ ಜೋಷಿ, ಶಿವಲೀಲಾ ದಳವಾಯಿ, ಎಂ.ಬಿ. ಅಳವಂಡಿ, ಶಂಕ್ರ​‍್ಪ ಸುರಪುರ, ಶರಣಪ್ಪ ಹೊಸ್ಕೇರಾ, ಶರಣಪ್ಪ ನಿಲೋಗಲ್, ರಂಗನಾಥ ವಾಲ್ಮೀಕೊಂಡಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಕಳಕಪ್ಪ ತಳವಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ