ಎಸ್ಐಆರ್ ಲೋಪ ಸರಿಪಡಿಸಲು ಡಿಸಿಗೆ ಬಿಜೆಪಿ ಮನವಿ
ಬೆಳಗಾವಿ 15: ಇತ್ತೀಚೆಗೆ ನಡೆದ ಎಸ್ಐಆರ್ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಲೋಪಗಳು ಹಾಗೂ ಆಡಳಿತಾತ್ಮಕ ತೊಡಕುಗಳನ್ನು ಸರಿಪಡಿಸಿ, ಹೊಸ ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡುವಂತೆ ಬಿಜೆಪಿ ಮುಖಂಡರು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬೆಳಗಾವಿಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಗೊಂದಲಗಳು ಉಂಟಾಗಿದ್ದು, ಕೆಲ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅನರ್ಹ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿನ ಇಂತಹ ಲೋಪಗಳನ್ನು ಬಿಜೆಪಿ ಖಂಡಿಸಿದ್ದು, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಾರುತಿ ಜಿರಲಿ, ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ರಾಜೇಂದ್ರ ಹರಕುಣಿ, ಮುರಗೇಂದ್ರಗೌಡ ಪಾಟೀಲ, ವಿಜಯ ಕೊಡಗನೂರ, ಮುರಗೇಶ ಪಾಟೀಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.