ಲಕ್ಷ್ಮೇಶ್ವರವನ್ನು ಬರಪೀಡಿತ ತಾಲೂಕು ಘೋಷಿಸಲು ಬಿಜೆಪಿ ಮನವಿ
BJP urges declaration of Lakshmeshwar as drought-hit taluk.
ಲಕ್ಷ್ಮೇಶ್ವರ 29: ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಹಾಗೂ ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್ಗಳಿಗೆ ಸೂಚಿಸುವಂತೆ ಆಗ್ರಹಿಸಿ ಬಿಜೆಪಿ ಮಂಡಲದ ವತಿಯಿಂದ ಉಪ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ ಮಂಡಲ ಅಧ್ಯಕ್ಷ ಸುನಿಲ್ ಮಹಾಂತಶೆಟ್ಟರ್, ಪ್ರಸಕ್ತ ಸಾಲಿನಲ್ಲಿ ಸಮರ್ಕ ಮಳೆಯಾಗದೆ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ಕೂಡ ವಾಪಸ್ ಬಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳೆ ನಷ್ಟದಿಂದ ಕೃಷಿ ಹಾಗೂ ಬೆಳೆ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಬರ ಪರಿಸ್ಥಿತಿಯನ್ನು ಪರಿಗಣಿಸಿ ತಾಲೂಕಿನಲ್ಲಿ ತಕ್ಷಣ ಸಮಗ್ರ ಬೆಳೆ ನಷ್ಟ ಸಮೀಕ್ಷೆ ನಡೆಸಿ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಅರ್ಹ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು.
ಅಲ್ಲದೆ, ಸಾಲ ಮರುಪಾವತಿಗೆ ರೈತರಿಗೆ ಅನಗತ್ಯ ಒತ್ತಡ ಅಥವಾ ಕಿರುಕುಳ ನೀಡದಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ರೈತರ ಸಾಲವನ್ನು ನಿಯಮಾನುಸಾರ ಪುನರ್ರಚನೆ ಅಥವಾ ಮರುಹೊಂದಾಣಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 