ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ಕಲಬುರ್ಗಿ ಪಾಲಿಕೆ ಚುನಾವಣೆ ಬಿಜೆಪಿ ಪಾಲಾಗಲಿವೆ: ಸಚಿವ ಭೈರತಿ ಬಸವರಾಜ
ರಾಣೇಬೆನ್ನೂರ 29: ಹುಬ್ಬಳ್ಳಿ ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಆ ಮೂರು ಮಹಾನಗರ ಪಾಲಿಕೆಗಳು ಬಿಜೆಪಿ ಪಾಲಾಗಲಿವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಶನಿವಾರ ನಗರದ ಹೊರವಲಯದಲ್ಲಿ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.
ಉಭಯ ಸರಕಾರಗಳು ಜನೋಪಯೋಗಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ರಾಜ್ಯದ ಅಭಿವೃದ್ಧಿಗೆ ನಾಂದಿಯಾಗಿದೆ. ಮುಂಬರುವ ದಿನಮಾನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರ ಪ್ರೀತಿ ವಿಶ್ವಾಸ ಗಳಿಸಲು ಪ್ರಯತ್ನಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿಸಚಿವ ಬಿ.ಸಿ.ಪಾಟೀಲ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ಅರುಣಕುಮಾರ ಪೂಜಾರ, ಚೋಳಪ್ಪ ಕಸವಾಳ ಮತ್ತಿತರರು ಇದ್ದರು.