ಇಂಡಿ

ಸಿಂದಗಿ ಉಪಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು: ನೇದಲಗಿ

ಸಿಂದಗಿ ಉಪಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು: ನೇದಲಗಿ


ಇಂಡಿ: ಸಿಂದಗಿ ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಲು ಕಾರ್ಯಕರ್ತರೇ ಶ್ರಮ ಮತ್ತು ಬಿಜೆಪಿಯ ಎಲ್ಲ ಮುಖಂಡರ ಶ್ರಮವೇ ಕಾರಣವಾಗಿದೆ ಎಂದು ಬಿಜೆಪಿ ಮುಖಂಡ ಶಿವಯೋಗೆಪ್ಪ ನೇದಲಗಿ ಹೇಳಿದರು. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಾದಿಯಾಗಿ ಎಲ್ಲ ಸಚಿವರು, ಶಾಸಕರು ಸಿಂದಗಿ ಕ್ಷೇತ್ರದಲ್ಲಿ ಬೀಡು ಬಿಟ್ಟು ಅಭ್ಯರ್ಥಿಗೆ ಮತ್ತು ಕಾರ್ಯಕರ್ತರಿಗೆ ಹುರುಪು ತುಂಬಿದರು. ಹೀಗಾಗಿ ಕಾರ್ಯಕರ್ತರು ಹಾಗೂ ಜಿಲ್ಲೆಯ ಬಿಜೆಪಿ ಮಖಂಡರು ಕ್ಷೇತ್ರದಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರು.  

ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಇಡೀ ರಾಜ್ಯದ ಕಾಂಗ್ರೆಸ್ ಮುಖಂಡರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ಖರ್ಗೆಯವರಾದಿಯಾಗಿ ಎಲ್ಲರೂ ಪ್ರಚಾರ ಮಾಡಿದರೂ ಕ್ಷೇತ್ರದ ಜನ ಅಭಿವೃದ್ಧಿಯ ಪರವಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಂದಗಿ ಕ್ಷೇತ್ರದ ಜನರಿಗೆ ಅಭಿನಂದಿಸುವುದಾಗಿ ತಿಳಿಸಿದರು. 


ಸುದ್ದಿ ಓದಿ