ಬೈಲಹೊಂಗಲ

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬೈಲಹೊಂಗಲದಲ್ಲಿ ವಿಜಯೋತ್ಸವ

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬೈಲಹೊಂಗಲದಲ್ಲಿ ವಿಜಯೋತ್ಸವ

ಬೈಲಹೊಂಗಲ 03: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯಸಾಧಿಸಿದ ನಿಮಿತ್ತ ಬೈಲಹೊಂಗಲ ಬಿಜೆಪಿ ಮಂಡಲ ವತಿಯಿಂದ ಭಾನುವಾರ ಪಟಾಕಿ ಸಿಡಿಸಿ, ಸಿಂಹಿ ವಿತರಿಸಿ ವಿಜಯೋತ್ಸವ ಆಚರಿಸಲಾಯಿತು.  

ಮಾಜಿ ಶಾಸಕ ಜಗದೀಶ ಮೆಟಗುಡ್ಡ ನೇತೃತ್ವವಹಿಸಿ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ್, ಛತ್ತೀಸಗಢ ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯಸಾಧಿಸಿರುವುದು ಹೆಮ್ಮೆಯ ವಿಚಾರ. ಪ್ರಬುದ್ಧ ಮತದಾರರು ಬಿಟ್ಟಿ ಭಾಗ್ಯಗಳಿಗೆ ಮರುಳಾಗದೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಮೂರು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರ ದಿಟ್ಟ ಪ್ರಯತ್ನದಿಂದ ಈ ಗೆಲುವು ಸಿಕ್ಕಿದೆ. ತೆಲಂಗಾಣ ರಾಜ್ಯದಲ್ಲಿ ಹತ್ತು ಸ್ಥಾನಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸಿರುವುದು ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದಲ್ಲೂ ಬಿಜೆಪಿ ಸರಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಚುನಾವಣೆಯು 2024ರ ಲೋಕಾಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದರು.  

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಗುರುಪಾದ ಕಳ್ಳಿ, ಉಪಾಧ್ಯಕ್ಷ ಸುಭಾಸ್ ತುರಮರಿ, ಯುವ ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಅಮ್ಮಿನಭಾವಿ, ಓಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಂತೋಷ ಹಡಪದ, ಯುವ ಮೋರ್ಚಾ ಜಿಲ್ಲಾ ಕೋಶಾಧ್ಯಕ್ಷ ಸಚೀನ ಕಡಿ, ನಾಮದೇವ ಶಿಂಗಣ್ಣನವರ, ಬಸವರಾಜ ಈಟಿ, ವೀರೇಶ ಬೂಷಣ್ಣವರ, ನಾಗಪ್ಪ ಸಂಗೊಳ್ಳಿ, ರಾಘು ಕುಮಚಿ, ಮಹಾಂತೇಶ ಮಾಟನವರ, ಮಾಜಿ ಪುರಸಭೆ ಸದಸ್ಯ ಬಸವರಾಜ ಶಿಂತ್ರಿ, ಶೆಕಪ್ಪ ಜತ್ತಿ, ಅನೇಕ ಪದಾಧಿಕಾರಿಗಳು ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. 


ಸುದ್ದಿ ಓದಿ