ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಮುಂಡಗೋಡ: ತಾಲೂಕಿನ ಕಾತೂರ ಗ್ರಾಮದ ಸುಮಾರು 25ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ವಿ.ಎಸ್.ಪಾಟೀಲ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಯಾದರು. ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ವಿ.ಎಸ್.ಪಾಟೀಲ ಶಾಲು ಹೊದಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ ರಾಮಕೃಷ್ಣ ಮೂಲಿಮನಿ, ರಾಜು ಹಿರೇಮಠ, ಧರ್ಮರಾಜ ನಡಿಗೇರ, ಕಮಲಾಕರ ರಾಯ್ಕರ, ನಿತಿನ ರಾಯ್ಕರ, ಲಕ್ಷ್ಮಣ ಬನಸೋಡೆ, ಮರಿಯೋಜ ರಾವ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.