ಬಿಎಲ್‌ಡಿಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ

BLDE Deemed University Dr. B.R. Ambedkar Jayanti Celebration

ಲೋಕದರ್ಶನ ವರದಿ 

ಬಿಎಲ್‌ಡಿಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ 

ವಿಜಯಪುರ, 14 : ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರು ನಮಗೆ ನೀಡಿರುವ ಹಕ್ಕುಗಳನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ಬಿ.ಎಲ್‌.ಡಿ.ಇ ಡೀಡ್ಮ್‌ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. 

ಇಂದು ಸೋಮವಾರ ನಗರದ ಬಿ. ಎಲ್‌. ಡಿ. ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ನಡೆದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.   

ಡಾ. ಅಂಬೇಡ್ಕರ ಅವರು ದೇಶದಲ್ಲಿ ಮಾನವ ಹಕ್ಕುಗಳು ಮತ್ತು ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು.  ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿದ್ದಾರೆ.  ಈ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು ಎಂದು ಅವರು ಹೇಳಿದರು.  

ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಅವರು ಅಂಬೇಡ್ಕರ್ ಅವರ ಸಮಾನತೆ ಮತ್ತು ಸಮಾಜದ ಶೋಷಿತ ವರ್ಗದ ಹಕ್ಕುಗಳ ಕುರಿತು ಮಾತನಾಡಿದರು.  

ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಅಲೈಡ್ ಹೆಲ್ತ್‌ ಸೈನ್ಸ ಡೀನ್ ಡಾ. ಎಸ್‌. ವಿ. ಪಾಟೀಲ, ಆರ್‌. ಮತ್ತು ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ಸ್ಟುಡೆಂಟ ಅಫೆರ್ಸ್‌ ಡೀನ್ ಡಾ. ಆನಂದ ಅಂಬಲಿ, ಚೀಫ್ ವಾರ್ಡನ್ ಡಾ. ಉದಯಕುಮಾರ ನುಚ್ಚಿ, ಸಹಾಯಕ ರಜಿಸ್ಟ್ರಾರ್ ಡಾ. ಶ್ರೀಧರ ಬಗಲಿ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.