ಮನೆ ಮನೆಗೆ ಬಿಎಲ್ಒ ಭೇಟಿ: ಮತದಾರರು ಅರ್ಜಿ ಭರ್ತಿ ಕಡ್ಡಾಯ
BLO door-to-door visits: Voters are required to fill out an application
ಲಕ್ಷ್ಮೇಶ್ವರ 28: ಜೂನ್ 30, 2026ರಿಂದ ಎಸ್ಐಆರ್ ಅಡಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ ಎಂದು ತಹಶೀಲ್ದಾರ ಎಂ. ಧನಂಜಯ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪರಿಷ್ಕರಣೆ ಕಾರ್ಯದ ಅಂಗವಾಗಿ ಬಿಎಲ್ಒ ಮನೆ ಮನೆಗೆ ಭೇಟಿ ನೀಡಿ ಅರ್ಜಿ ನಮೂನೆ ವಿತರಿಸಿ ಮತದಾರರ ಸಹಿ ಪಡೆಯಲಿದ್ದಾರೆ. ನಂತರ ಮತದಾರರು ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಒಂದು ಪಾಸ್ಪೋರ್ಟ್ ಗಾತ್ರದ ಭಾವಚಿತ್ರ ಅಂಟಿಸಿ ನಿಗದಿತ ಅವಧಿಯೊಳಗೆ ಸಂಬಂಧಿತ ಬಿಎಲ್ಒ ಅವರಿಗೆ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ ಇರುವುದರಿಂದ ಎಲ್ಲ ಮತದಾರರು ಕಡ್ಡಾಯವಾಗಿ ಸಹಕರಿಸಬೇಕು. ಪಾಸ್ಪೋರ್ಟ್ ಗಾತ್ರದ ಭಾವಚಿತ್ರ ಇಲ್ಲದವರು ಕೂಡಲೇ ಫೋಟೊ ತೆಗೆಸಿಕೊಂಡು ಸಿದ್ಧವಾಗಿರಬೇಕು ಎಂದು ಅವರು ತಿಳಿಸಿದ್ದಾರೆ. ಮತದಾರರು ಚುನಾವಣಾ ಆಯೋಗದ ಈ ಮಹತ್ವದ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ತಹಶೀಲ್ದಾರ ಎಂ. ಧನಂಜಯ ಮನವಿ ಮಾಡಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 