ಅಂತಾರಾಷ್ಟ್ರೀಯ ದಾದಿಯರ ದಿನದ ಶುಭ ಕೋರಿದ ಬಿಎಸ್ ವೈ, ಶ್ರೀರಾಮುಲು
ಬೆಂಗಳೂರು, ಮೇ12, ಫ್ಲಾರೆನ್ಸ್ ನೈಟಿಂಗೇಲ್ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ಅಂತಾರಾಷ್ಟ್ರೀಯ ದಾದಿಯರ ದಿನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ದಾದಿಯರಿಗೆ ಶುಭ ಕೋರಿದ್ದಾರೆ.ಅತ್ಯಂತ ಸೂಕ್ಷ್ಮ ಮತ್ತು ಸವಾಲಿನ ವೃತ್ತಿಯ ಜತೆಗೆ ಸಂಸಾರಿಕ ಜವಾಬ್ದಾರಿಗಳನ್ನೂ ನಿಭಾಯಿಸುತ್ತ, ಕೋವಿಡ್-19ನಂತಹ ಗಂಭೀರ ಪರಿಸ್ಥಿತಿಗಳಲ್ಲಿ ಒತ್ತಡಕ್ಕೊಳಗಾಗದೆ ಸೇವೆಯಲ್ಲೇ ಸಾರ್ಥಕತೆ ಕಾಣುವ ಸಮಸ್ತ ಶುಶ್ರೂಷಕಿಯರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಶುಶ್ರೂಕಿಯರಿಗೆ 'ಅಂತಾರಾಷ್ಟ್ರೀಯ ದಾದಿಯರ ದಿನ' ದ ಶುಭಾಶಯ ತಿಳಿಸಿದ್ದಾರೆ.
ಇನ್ನು, ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು, ಪ್ರಪಂಚ ಕೊರೊನಾ ಮಹಾಮಾರಿಯ ವಿರುದ್ಧ ಯುದ್ಧಕ್ಕೆ ನಿಂತಿರುವ ಸಂದರ್ಭದಲ್ಲಿಯೇ ವಿಶ್ವ ದಾದಿಯರ ದಿನ ಬಂದಿದ್ದು, ಸಮಸ್ತ ದಾದಿಯರಿಗೆ ಹಾರ್ದಿಕ ಶುಭಾಶಯಗಳು. ಈ ಮಹಾಸಂಕಟದ ಸಮಯದಲ್ಲಿ ಮಾತೃ ಹೃದಯದ ನರ್ಸ್ ಗಳು ಮಾಡುತ್ತಿರುವ ಸೇವೆ ನಮ್ಮ ಕಣ್ಣ ಮುಂದಿದೆ. ಅವರ ಈ ಸೇವೆಯನ್ನು ಸಮಾಜ ಸದಾಕಾಲ ಸ್ಮರಿಸುತ್ತದೆ. ದಾದಿಯರ ಜೀವನ ಮಟ್ಟವನ್ನು ಸುಧಾರಿಸಲು ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 