ಯುವತಿಯ ಮನವಿಗೆ ಸ್ಪಂದಿಸಿದ ಬಿಎಸ್ ವೈ
ಬೆಳಗಾವಿ, ಏ.11, ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ.ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ ಅರಂಭಾವಿ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ವೇಳೆ ಪತಿ ಪತ್ನಿಗಾಗಿ ತಮ್ಮ ಒಂದು ಕಿಡ್ನಿ ದಾನ ಮಾಡಿದ್ದರು. ಜನವರಿ 17ರಂದು ಹುಬ್ಬಳ್ಳಿಯ ಎಸ್‍ಡಿಎಂ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಮಾಡಲಾಗಿತ್ತು. ಆದರೆ, ಕೊರೊನಾ ಸೋಂಕು ನಿಯಂತ್ರಿಸಲು ಲಾಕ್‍ಡೌನ್ ಆದೇಶವಾದ ಹಿನ್ನೆಲೆಯಲ್ಲಿ ಶೇಖವ್ವ ಅವರಿಗೆ ಅಗತ್ಯ ಔಷಧಿಗಳು ದೊರೆಯದೇ ಇದುದ್ದರಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದರು.ತಾಯಿಯ ಆರೋಗ್ಯ ಸ್ಥಿತಿ ನೋಡಲಾಗದೇ, ಶೇಖವ್ವ ಅವರ ಮಗಳು ಪವಿತ್ರ ಟಿಕ್ ಟಾಕ್‍ನಲ್ಲಿ ವಿಡಿಯೋ ಮಾಡಿ, ತನ್ನ ತಾಯಿ ಸೂಕ್ತ ಔಷಧವಿಲ್ಲದೇ, ಸಾವು ಬದುಕಿನ ಹೋರಾಡುತ್ತಿದ್ದು,ಮುಖ್ಯಮಂತ್ರಿಗಳು ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದರು. ವಿಡಿಯೋ ನೋಡಿದ ತಕ್ಷಣವೇ ಎಚ್ಚೆತ್ತುಕೊಂಡ ಮುಖ್ಯಮಂತ್ರಿಗಳು ಬೆಳಗಾವಿಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಕರೆ ಮಾಡಿ ಶೇಖವ್ವ ಅರಂಭಾವಿ ಅವರಿಗೆ ತಕ್ಷಣವೇ ಒಂದು ತಿಂಗಳಿಗಾಗುವಷ್ಟು ಅಗತ್ಯ ಔಷಧಿಗಳನ್ನು ಪೂರೈಸಿ ಎಂದು ಆದೇಶಿಸಿದರು. ಸಿಎಂ ಆದೇಶಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಶೇಖವ್ವ ಅರಂಭಾವಿ ಅವರಿಗೆ ಅಗತ್ಯ ಔಷಧಿ ಪೂರೈಸಿ, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 