ರಾಷ್ಟ್ರೀಯ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ

ನವದೆಹಲಿ, ಜ 02 :ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ಶನಿವಾರ ನಿಧನರಾಗಿದ್ದಾರೆ.  ಅವರಿಗೆ 86 ವರ್ಷ ವಯಸ್ಸಾಗಿತ್ತು. ಬೂಟಾ ಸಿಂಗ್ ಕೇಂದ್ರ ಗೃಹ ಸಚಿವರಾಗಿ ಮತ್ತು ಬಿಹಾರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ಅವರು 2007 ರಿಂದ 2010 ರವರೆಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು. ಅಕಾಲಿ ದಳದ ಸದಸ್ಯರಾಗಿ ತಮ್ಮ ಮೊದಲ ಚುನಾವಣೆಗಳಲ್ಲಿ ಸ್ಪರ್ಧಿಸಿದರು ಮತ್ತು 1960 ರ ದಶಕದ ಉತ್ತರಾರ್ಧದಲ್ಲಿ ಆ ಪಕ್ಷ ವಿಭಜನೆಯಾದ ಸಮಯದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರಿದರು. ರಾಜಕೀಯಕ್ಕೆ ಸೇರುವ ಮೊದಲು ಪತ್ರಕರ್ತರಾಗಿ ಕೆಲಸ ಮಾಡಿದ್ದರು.

  


ಸುದ್ದಿ ಓದಿ