ಕೆಆರ್‌ಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಬಿ ವಿ ಶ್ರೀನಿವಾಸರೆಡ್ಡಿ ನೇಮಕ
ಬಳ್ಳಾರಿ 02: ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ರಾಜ್ಯ ಉಪಾಧ್ಯಕ್ಷರನ್ನಾಗಿ ಬಿ ವಿ ಶ್ರೀನಿವಾಸ ರೆಡ್ಡಿ ತಂದೆ ಬಿ ವೆಂಕಟರೆಡ್ಡಿ, ವಾರ್ಡ್ ನಂ 35, ಸಿರುಗುಪ್ಪ ರಸ್ತೆ, ಬಳ್ಳಾರಿ ಇವರನ್ನು ರಾಜ್ಯ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ್ ರೆಡ್ಡಿ ಅವರು ನೇಮಕ ಮಾಡಿ ಆದೇಶ ಪತ್ರವನ್ನು ನೀಡಿದ್ದಾರೆ. ತಮಗಿರುವ ರಾಜಕಿಯ ಅನುಭವ ಮತ್ತು ನಾಯಕತ್ವದ ಗುಣಗಳೊಂದಿಗೆ ಹಾಗೂ ನಿಷ್ಠೆ ಮತ್ತು ಪ್ರಮಾಣಿಕತೆಯೊಂದಿಗೆ ಕೆಲಸ ಮಾಡಿ ಪಕ್ಷವನ್ನು ಸಂಘಟಿಸಲು ಸಂಪೂರ್ಣವಾಗಿ ತೊಡಗಿಸಿಕೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕೆಂದು ಆದೇಶ ಹೊರಡಿಸಲಾಗಿದೆ.