ಬಳ್ಳಾರಿ

ಬಿರಾದಾರ ಅಗಲಿಕೆಗೆ

ಬಿರಾದಾರ ಅಗಲಿಕೆಗೆ

ರಂಭಾಪುರಿ ಪೀಠ (ಬಾಳೆಹೊನ್ನೂರು) 15:  ಶೈಕ್ಷಣಿಕ ಕ್ಷೇತ್ರದಲ್ಲಿ ಅಮೂಲ್ಯ ಸೇವೆ ಸಲ್ಲಿಸಿ ಧಾರ್ಮಿಕ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿದ ಭಾಲ್ಕಿಯ ಬಾಬುರಾವ್ ಬಿರಾದಾರ ಅವರ ತಮ್ಮ 69ನೇ ವಯಸ್ಸಿನಲ್ಲಿ ಶಿವೈಕ್ಯರಾದ ವಿಷಯ ತಿಳಿದು ರಂಭಾಪುರಿ ಡಾ, ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  

ವೀರಶೈವ ಸಮಾಜದ ಹಿರಿಯ ಜೀವ ಭೀಮಣ್ಣ ಖಂಡ್ರೆ ಅವರ ಇಂಜನೀಯರಿಂಗ್ ಕಾಲೇಜಿನ ಆಡಳಿತಾಧಿಕಾರಿಗಳಾಗಿ ಸುದೀರ್ಘ ಸೇವೆ ಸಲ್ಲಿಸಿದ ಕೀರ್ತಿ ಇವರದು. ರಾಜಕೀಯ ಯುವ ಧುರೀಣ ಈಶ್ವರ ಖಂಡ್ರೆ ಅವರ ಸಾರಥ್ಯದಲ್ಲಿ ಭಾಲ್ಕಿ ತಾಲೂಕ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ವೀರಶೈವ ಧರ್ಮ ಸಂಸ್ಕೃತಿಯ ಪುನರುತ್ಥಾನಕ್ಕೆ ಶ್ರಮಿಸಿದ ಜೀವ. ಸೇವಾ ನಿವೃತ್ತಿ ನಂತರ ಜಗದ್ಗುರು ರೇಣುಕಾಚಾರ್ಯರು ಆವಿರ್ಭವಿಸಿದ ತೆಲಂಗಾಣ ರಾಜ್ಯದ ಕೊಲನುಪಾಕ ಕ್ಷೇತ್ರಾಭಿವೃದ್ಧಿ ಟ್ರಸ್ಟಿನ ಕೋಶಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವುದನ್ನು ಮರೆಯಲಾಗದು. ಶ್ರೀ ರಂಭಾಪುರಿ ಪೀಠದೊಂದಿಗೆ ನಿಕಟ ಸಂಬಂಧ ಹೊಂದಿದ ಅವರ ಅಗಲಿಕೆಯಿಂದ ಒಬ್ಬ ದಕ್ಷ ಕ್ರಿಯಾಶೀಲ ಮತ್ತು ಜನಾನುರಾಗಿ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ. ಪತ್ನಿ ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಅಪಾರ ಬಂಧು ಬಳಗ ಬಿಟ್ಟು ಅಗಲಿದ ಬಾಬುರಾವ್ ಬಿರಾದಾರ ಆತ್ಮಕ್ಕೆ ಪರಮಾತ್ಮ ಚಿರಶಾಂತಿಯಿತ್ತು ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ಜಗದ್ಗುರು ರೇಣುಕಾಚಾರ್ಯರು ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಕರುಣಿಸಲೆಂದು ಜಗದ್ಗುರುಗಳವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ