ಫೆ.1ರಂದು ಬ್ಯಾಡಗಿ ಪಟ್ಟಣಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ
ಬ್ಯಾಡಗಿ: ಕ್ಷೇತ್ರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅಣೂರ ಮತ್ತು ಬುಡುಪನಹಳ್ಳಿ ಗ್ರಾಮಗಳ ಕೆರೆ ತುಂಬಿಸುವ ನೀರಾವರಿ ಯೋಜನೆಯ ಕಾಮಗಾರಿಗಳ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಇದೇ ಫೆ.1ರಂದು ಬ್ಯಾಡಗಿ ಪಟ್ಟಣಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಪಟ್ಟಣದ ಬಿಜೆಪಿ ಪಕ್ಷದ ಕಾಯರ್ಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಾವು ಚುನಾವಣೆಯ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ನೀಡಿರುವ ಆಶ್ವಾಸನೆಯಂತೆ ಕೆರೆಗಳಿಗೆ ನೀರು ತುಂಬಿಸುವ ಮೂಲಕ ನೀರಾವರಿ ಸೌಲಭ್ಯಕ್ಕೆ ಆದ್ಯತೆಯನ್ನು ನೀಡಿದ್ದೇವೆ. ಈ ಯೋಜನೆಗಳಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರ ಸ್ವೀಕರಿಸಿದ ಪ್ರಥಮ ಹಂತದಲ್ಲಿಯೇ ಕ್ಷೇತ್ರದ ಮಹತ್ವದ ಯೋಜನೆಗಳಿಗೆ 369 ಕೋಟಿ ರೂಗಳ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ರೈತಾಪಿ ವರ್ಗದ ಜನರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಅಲ್ಲದೇ ಇದೇ ಯೋಜನೆಗಳಿಗೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಹೆಚ್ಚುವರಿಯಾಗಿ 40ಕೋಟಿ ರೂಗಳನ್ನು ಬಿಡುಗಡೆ ಮಾಡಿ ನೀರಾವರಿ ಯೋಜನೆಯ ಕಾಮಗಾರಿಗಳ ಪೂರ್ಣಗೊಳಿಸಲು ಪ್ರಾಶಸ್ತ್ಯವನ್ನು ನೀಡಿರುವುದು ಅಭಿನಂದನೀಯ ಎಂದರಲ್ಲದೇ, ಬ್ಯಾಡಗಿಯ ತಾಲೂಕಾ ಕ್ರೀಡಾಂಗಣದಲ್ಲಿ ಫೆಬ್ರುವರಿ 1ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ, ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಹಿರಿಯ ಮುಖಂಡರು ಆಗಮಿಸಲಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾರ್ಯಕರ್ತರು, ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಪಕ್ಷದ ತಾಲೂಕಾಧ್ಯಕ್ಷ ಹಾಲೇಶ ಜಾಧವ ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ ಬ್ಯಾಡಗಿ ವಿಧಾನಸಭಾ ಕ್ಷೇತ್ರದ 118ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ 241 ಬೂತಗಳಲ್ಲಿ ಇದೇ ದಿ.21ರಿಂದ 29ರವರೆಗೆ ಪ್ರತಿಯೊಂದು ಮನೆಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾ ರಗಳ ಸಾಧನೆಗಳ ಕರಪತ್ರಗಳನ್ನು ಹಂಚಿಕೆ ಮಾಡಿ, ಮನೆಗಳಿಗೆ, ವಾಹನಗಳಿಗೆ ಸ್ಟಿಕರ್ ಅಂಟಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸಕರ್ಾರ ಅಸ್ಥಿತ್ವಕ್ಕೆ ತರುವ ಘೋಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಲದೇ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನ ಫೋನ್ ನಂಬರ್ ಮೂಲಕ ಪ್ರಾರಂಭಿಸಿದ್ದು, ಮಿಸ್ ಕಾಲ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದರು.ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷೆ ಫಕ್ಕೀರಮ್ಮ ಚಲುವಾದಿ, ಉಪಾಧ್ಯಕ್ಷೆ ಮಲ್ಲಮ್ಮ ಪಾಟೀಲ, ಸದಸ್ಯರಾದ ಗಾಯತ್ರಿ ರಾಯ್ಕರ್, ಚಂದ್ರಪ್ಪ ಶೆಟ್ಟರ, ಪಕ್ಷದ ಮುಖಂಡರಾದ ಸುರೇಶ ಯತ್ನಳ್ಳಿ, ಎಸ್.ಎನ್.ಯಮುನಕ್ಕನವರ, ಜಿತೇಂದ್ರ ಸುಣಗಾರ, ಸುರೇಶ ಉದ್ಯೋಗಣ್ಣನವರ, ಉಮೇಶ್ ರಟ್ಟಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಾ ಪ್ರಧಾನ ಕಾರ್ಯದಶರ್ಿ ರಮೇಶ ಅರಬಗೊಂಡ ಸ್ವಾಗತಿಸಿದರು. ಸತೀಶ ವಂದಿಸಿದರು .