ಗೋಕಾಕ್

ಬಡಿಗವಾಡ: ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ಬಡಿಗವಾಡ: ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ಘಟಪ್ರಭಾ 06: ಸಮೀಪದ ಬಡಿಗವಾಡ ಗ್ರಾಮದಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯು ಲಕ್ಷ್ಮೀ ದೇವಸ್ಥಾನದಲ್ಲಿ ಸೋಮವಾರ ಜರುಗಿತು. 

ಸಭೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ, 14 ಮತ್ತು 15 ನೇ ಹಣಕಾಸು ಆಯೋಗಗಳ 2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಖರ್ಚಾದ ಮೊತ್ತವನ್ನು ಹಾಗೂ ಕಾಮಗಾರಿಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ನರೇಗಾ ಮತ್ತು 14 ಮತ್ತು 15 ನೇ ಹಣಕಾಸಿನಲ್ಲಿ ಕಂಡು ಬಂದಂತಹ ಗುಣಾತ್ಮಕ ಮತ್ತು ಋಣಾತ್ಮಕ ಅಂಕಗಳನ್ನು ಗ್ರಾಮ ಸಭೆಯಲ್ಲಿ ಮಂಡಿಸಲಾಯಿತು. 

ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗೋಕಾಕ ಇವರು ವಹಿಸಿದ್ದರು, ಸಭೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಾಯಪ್ಪ ಬಂಡ್ರೋಳ್ಳಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ ಮನಗೂಳಿ, ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರಾದ ಕಲಗೌಡ ಕಾರತಗಿ, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸಾಮಾಜಿಕ ಪರಿಶೋಧನೆ ತಂಡದ ಸದಸ್ಯರು ಹಾಗೂ  ಬಡಿಗವಾಡ ಗ್ರಾಮದ ಗ್ರಾಮಸ್ಥರು ಭಾಗಿಯಾಗಿದ್ದರು. 


ಸುದ್ದಿ ಓದಿ