ಬಾಜೀರಾವ ಮಗದುಮ್ಮ ಪ್ರೌಢಶಾಲೆಯ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ
Bajirao Magadumma High School's cultural and sports activities launched
ಬಾಜೀರಾವ ಮಗದುಮ್ಮ ಪ್ರೌಢಶಾಲೆಯ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ
ರಾಯಬಾಗ 06: ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹುದ್ದೆಯನ್ನು ಪಡೆಯಲು ವಿದ್ಯಾರ್ಥಿಗಳು ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಆದರ್ಶ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ಶನಿವಾರ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯ 2025-26ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಂಸ್ಥೆ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ಶಿರಗುಪ್ಪಿ ಕೆಎಲ್‌ಇ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜಯವೀರ ಎ.ಕೆ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಜ್ಞಾನ ಮತ್ತು ಸದೃಢ ಆರೋಗ್ಯವನ್ನು ಸಂಪಾದಿಸಬೇಕೆಂದರು.
ಸಂಸ್ಥೆ ಉಪಾಧ್ಯಕ್ಷ ಜೆ.ಎಮ್.ಮಗದುಮ್ಮ, ಕಾರ್ಯದರ್ಶಿ ಎ.ಟಿ.ಕೂಗೆ, ಸದಸ್ಯರಾದ ಎ.ಡಿ.ಜನಾಜ, ಎ.ಜೆ.ಕಾಮಗೌಡ, ಆರ್.ಬಿ.ಪಾಟೀಲ, ಬಿ.ಜೆ.ಜನಾಜ, ಎ.ಡಿ.ಕಾಮಗೌಡ, ಕುಮಾರ ಕಾಮಗೌಡ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಮುಖ್ಯೋಪಾಧ್ಯಾಯ ಅರುಣ ಸಲಗರೆ ಸ್ವಾಗತಿಸಿದರು, ಸಿಂಚನಾ ಪಾಟೀಲ ನಿರೂಪಿಸಿದರು, ಸಹನಾ ಕೂಗೆ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 