ಬೆಟಗೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ
Bakrid festival celebrated with fervor in Betageri
ಬೆಟಗೇರಿ 29 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ತ್ಯಾಗ ಬಲಿದಾನ ಹಾಗೂ ಸಹೋದರತ್ವದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು ಮೇ.28ರಂದು ಸ್ಥಳೀಯ ಮುಸ್ಲಿಂ ಸಮುದಾಯದವರು ಭಕ್ತಿಭಾವ, ಸಂಭ್ರಮದಿಂದ ಆಚರಿಸಿದರು.
ಇಲ್ಲಿಯ ಮುಸ್ಲಿಂ ಸಮಾಜದವರು ಬಕ್ರೀದ್ ಹಬ್ಬದ ಪ್ರಯುಕ್ತ ಮೇ.28ರಂದು ಮುಂಜಾನೆ 8:30 ಗಂಟೆಗೆ ಅಲ್ಲಾನ ನಾಮಸ್ಮರಣೆ ಮಾಡುತ್ತಾ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸರ್ವರಿಗೂ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ಮತ್ತು ಸಮೃದ್ಧಿ ದಯಪಾಲಿಸಲಿ ಎಂದು ಬೇಡಿಕೊಂಡ ಬಳಿಕ ಒಬ್ಬರಿಗೊಬ್ಬರೂ ಪರಸ್ಪರ ಆಲಿಂಗಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.
ಬಕ್ರೀದ್ ಹಬ್ಬದ ಪ್ರಯುಕ್ತ ಬೆಟಗೇರಿ ಗ್ರಾಮದ ಮುಸ್ಲಿಂ ಸಮಾಜದ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ವಸ್ತ್ರ ಧರಿಸಿ ಸಂಭ್ರಮದಿಂದ ಪಾಲ್ಗೊಂಡಿದ್ದರು. ಮೌಲಾನಾ ನಿಯಾಜ್ ರಾಜೇಖಾನ್, ರಫೀಕ ಮಿರ್ಜಾನಾಯ್ಕ, ಕುತುಬುಸಾಬ ಮಿರ್ಜಾನಾಯ್ಕ, ಜಬ್ಬರ್‌ಸಾಬ ನದಾಫ್, ಬಾಬುಸಾಬ ಮಿರ್ಜಾನಾಯ್ಕ, ಮೀರಾಸಾಬ ನದಾಫ್, ಹಜರತ್ ಮಿರ್ಜಾನಾಯ್ಕ, ಮಲಿಕಸಾಬ ಮಿರ್ಜಾನಾಯ್ಕ, ಶ್ಯಾನೂರ ಮಿರ್ಜಾನಾಯ್ಕ ಸೇರಿದಂತೆ ಸ್ಥಳೀಯ ಮುಸ್ಲಿಂ ಸಮಾಜದ ಮುಖಂಡರು, ಹಿರಿಯರು, ಯುವಕರು, ಮಕ್ಕಳು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 