ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಬಾಲಚಂದ್ರ ಬಾಗಿ ಆಯ್ಕೆ
Balachandra Bagi elected as the president of Basava Jayanti Festival Committee
ಬೆಳಗಾವಿ 18 : ಜಿಲ್ಲಾ ಘಟಕ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು 2026ರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವ ಕೇಂದ್ರ ಸಮಿತಿಗೆ ಬಾಲಚಂದ್ರ ಬಾಗಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಾಗಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ.
ಉಪಾಧ್ಯಕ್ಷರಾಗಿ ನ್ಯಾಯವಾದಿ ವಿ.ಕೆ.ಪಾಟೀಲ, ಗುರುದೇವ ಪಾಟೀಲ, ವಿದ್ಯಾ ಚಂದ್ರಶೇಖರ ಗೌಡರ, ಮಹಾನಂದಾ ಶಿವಾನಂದ ಲೋಕನ್ನವರ, ಕೋಶಾಧ್ಯಕ್ಷರಾಗಿ ಬಸವರಾಜ ಕಾಡಪ್ಪಾ ಮಾದಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಕಿರಣ ಅಗಡಿ ಅವರು ಆಯ್ಕೆಯಾಗಿದ್ದಾರೆ.
ಬೆಳಗಾವಿ ಮಹಾಸಭೆಯು ಪ್ರತಿವರ್ಷ ಬಸವ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ಕರ್ಯಪ್ರಧಾನವಾಗಿದ್ದು, ಹಲವಾರು ಅರ್ಥಪೂರ್ಣ ಕರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಪರಂಪರೆಯಂತೆ ನೂತನ ಆಯ್ಕೆ ಸಮಿತಿ ಈ ಎಲ್ಲ ಜವಾಬ್ದಾರಿಗಳನ್ನು ನೆರವೇರಿಸಲಿದೆ ಎಂದು ರತ್ನಪ್ರಭಾ ಬೆಲ್ಲದ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜರುಗಿದ ಸಭೆಯಲ್ಲಿ ಮಹಾಸಭೆಯ ಸರ್ವ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 