ಏಷ್ಯನ್ ಪ್ಯಾರಾ ಗೇಮ್ಸ್ಗೆ ಬಳ್ಳಾರಿಯ ಈಜುಪಟು ಗೋಪಿಚಂದ್ ಲಿಂಗುಟ್ಲ ಆಯ್ಕೆ
ಲೋಕದರ್ಶನ ವರದಿ
ಬಳ್ಳಾರಿ 17: ಜಪಾನ್ನ ಐಚಿ-ನಾಗೋಯಾದಲ್ಲಿ ಅಕ್ಟೋಬರ್ 18 ರಿಂದ 24 ರವರೆಗೆ ಆಯೋಜಿಸಲಾಗಿರುವ 5ನೇ ಏಷ್ಯನ್ ಪ್ಯಾರಾ ಗೇಮ್ಸ್ಹಿ2026ರಲ್ಲಿ ಭಾರತವನ್ನು ಪ್ರತಿನಿಧಿಸಲು ಬಳ್ಳಾರಿ ಜಿಲ್ಲೆಯ ಪ್ಯಾರಾ ಈಜುಪಟು ಗೋಪಿಚಂದ್ ಲಿಂಗುಟ್ಲ ಆಯ್ಕೆಯಾಗಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಗುರಿ ಹೊಂದಿರುವ ಗೋಪಿಚಂದ್, ಮುಂಬರುವ ಕ್ರೀಡಾಕೂಟದಲ್ಲಿ 400 ಮೀಟರ್ ಫ್ರೀಸ್ಟೈಲ್ ಹಾಗೂ 100 ಮೀಟರ್ ಬ್ಯಾಕ್ಸ್ಟ್ರೋಕ್ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.