ಬ್ಯಾಂಕಾಕ್: ಡಾ. ಅಂಜನಾ ಬಾಗೇವಾಡಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ
Bangkok: Dr. Anjana Bagewadi wins best essay award
ಬೆಳಗಾವಿ 15: ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಬೆಳಗಾವಿಯ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದ ಉಪ ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕಿ ಡಾ. ಅಂಜನಾ ಬಾಗೇವಾಡಿ, ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಜುಲೈ 9ರಿಂದ 12ರವರೆಗೆ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿಯ 1ನೇ ಅಂತರರಾಷ್ಟ್ರೀಯ ಮತ್ತು 23ನೇ ರಾಷ್ಟ್ರೀಯ ಸ್ನಾತಕೋತ್ತರ ಸಮಾವೇಶದಲ್ಲಿ ಭಾಗವಹಿಸಿದರು.
ಅವರು ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ಸಮಗ್ರ ಮಾರ್ಗವಾದ ಪೋರ್ಟಫೋಲಿಯೋ ಕುರಿತು ಪ್ರಬಂಧವನ್ನು ಮಂಡಿಸಿದರು. ವೈಜ್ಞಾನಿಕ ಪ್ರಸ್ತುತಿಯನ್ನು ಪ್ರಶಂಸಿಸಿ ಅಧ್ಯಾಪಕರ ಅಧಿವೇಶನದಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ನೀಡಲಾಯಿತು.
ಡಾ. ಅಂಜನಾ ಅವರ ಯಶಸ್ಸು ಮತ್ತು ಸಂಸ್ಥೆಗೆ ಕೀರ್ತಿ ತಂದಿದ್ದಕ್ಕಾಗಿ ಪ್ರಾಂಶುಪಾಲ ಡಾ. ಅಲ್ಕಾ ಕಾಳೆ, ಡೀನ್ ಡಾ. ವಿನಾಯಕ್ ಕುಂಬೋಜ್ಕರ್, ವಿಭಾಗದ ಮುಖ್ಯಸ್ಥೆ ಡಾ. ವೈಶಾಲಿ ಕೆಲುಸ್ಕರ್ ಮತ್ತು ಸಿಬ್ಬಂದಿಗಳು ಅಭಿನಂದಿಸಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 