ಗ್ರಾಮೀಣ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳ ಪಾತ್ರ ಮಹತ್ವದ್ದು: ಬಸವರಾಜ ಬೊಮ್ಮಾಯಿ
Banks play a significant role in rural development: Basavaraj Bommai
ಲೋಕದರ್ಶನ ವರದಿ
ಹಾವೇರಿ 07: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳ ಪಾತ್ರ ಮಹತ್ವದ್ದಾಗಿದೆ. ರೈತರು, ಸಣ್ಣ ಉದ್ಯಮಿಗಳು ಹಾಗೂ ಸಾರ್ವಜನಿಕರು ಬ್ಯಾಂಕ್ಗಳ ವಿವಿಧ ಸಾಲ ಸೌಲಭ್ಯಗಳು ಮತ್ತು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹೊಸರತ್ತಿ ಗ್ರಾಮದಲ್ಲಿ ಸೋಮವಾರ ಬ್ಯಾಂಕ್ ಆಫ್ ಬರೋಡಾದ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಹತ್ತಿರವಾಗಿಸುವ ಉದ್ದೇಶದಿಂದ ಗ್ರಾಮದಲ್ಲಿಯೇ ಈ ಶಾಖೆ ಆರಂಭಿಸಲಾಗಿದೆ ಎಂದರು.
ಕೋವಿಡ್ ಹಾಗೂ ಯುದ್ಧಗಳ ಪರಿಣಾಮದಿಂದ ಹಲವು ದೊಡ್ಡ ರಾಷ್ಟ್ರಗಳ ಆರ್ಥಿಕತೆ ಕುಸಿದಿದ್ದರೂ ಭಾರತವು ಸಮರ್ಥವಾಗಿ ಎದುರಿಸಿ ಶೇ. 7.5ರಷ್ಟು ಜಿಡಿಪಿ ಬೆಳವಣಿಗೆ ಕಾಯ್ದುಕೊಂಡಿದೆ. ಅಮೆರಿಕ, ಜಪಾನ್ ಹಾಗೂ ಚೀನಾ ದೇಶಗಳಿಗೆ ಹೋಲಿಸಿದರೆ ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತವು ಶೇ. 25ರಷ್ಟು ಕೊಡುಗೆ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನಾ, ಉಪ ಮಹಾಪ್ರಬಂಧಕ ರಾಜೇಶ್ ಶರ್ಮಾ, ಶ್ರೀಮತಿ ಜಿ. ರೂಪಾ, ಸಹಾಯಕ ಪ್ರಧಾನ ವ್ಯವಸ್ಥಾಪಕ ಸುಹಾಸ್, ಮುಖ್ಯ ವ್ಯವಸ್ಥಾಪಕ ದೀಪಕ್ ಶಹಾಕರ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ಶಾಖಾ ವ್ಯವಸ್ಥಾಪಕ ನಾಗಾರ್ಜುನ ಚಾಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 