ವಿಜಯಪುರ

ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ


ವಿಜಯಪುರ, ಅ.2: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾತ್ಮ   ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.  ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ   ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.  

ಪ್ರೌಢಶಾಲಾ ವಿಭಾಗ  

ಪ್ರೌಢಶಾಲಾ ವಿಭಾಗದಲ್ಲಿ ಸಿಂದಗಿ ತಾಲ್ಲೂಕಿನ ಸುರಗಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರೇಮಾ ಕೆ. ಬಿರಾದಾರ ಪ್ರಥಮ ಸ್ಥಾನ ಪಡೆದರು. ವಿಜಯಪುರದ ಜಲನಗರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೇಣುಕಾ ಎಂ. ಕೇಸ್ಕರ್ ದ್ವಿತೀಯ ಸ್ಥಾನ ಹಾಗೂ ಕೆರೂರಿನ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಬಿರಾದಾರ ತೃತೀಯ ಸ್ಥಾನ ಪಡೆದರು.  


ಸುದ್ದಿ ಓದಿ