ರೇಣುಕಾ ಯಲ್ಲಮ್ಮ ದೇಗುಲಕ್ಕೆ ಬಸವರಾಜ ಬೊಮ್ಮಾಯಿ ಭೇಟಿ
Basavaraja Bommai visits Renuka Yellamma temple
ಲೋಕದರ್ಶನ ವರದಿ
ಸವದತ್ತಿ 23 : ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರಸಿದ್ಧ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಜಗನ್ಮಾತೆ ಯಲ್ಲಮ್ಮದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇವಾಲಯಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ದೇವಾಲಯದ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಬಳಿಕ ಗರ್ಭಗುಡಿಯಲ್ಲಿ ದೇವಿಯ ದರ್ಶನ ಪಡೆದ ಅವರು, ನಾಡಿನ ಸುಭಿಕ್ಷೆ ಮತ್ತು ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ್ರ, ವಿಜಯ ಮೆಟ್ಟಗುಡ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 