ಬರ ಸಮೀಕ್ಷೆ ನಡೆಸಿ ವಿಶೇಷ ಪರಿಹಾರ ಘೋಷಿಸಲು ಸರ್ಕಾರಕ್ಕೆ ಬಸವರಾಜ ಕ್ಯಾವಟರ್ ಒತ್ತಾಯ
Basavaraja Kyavatar urges the government to conduct a drought survey and announce special relief
ಕೊಪ್ಪಳ 14: ಜಿಲ್ಲೆಯಲ್ಲಿ ಜೂನ್ ಹಾಗೂ ಜುಲೈ ತಿಂಗಳುಗಳು ಮುಗಿಯುತ್ತ ಬಂದರೂ ಸಮರ್ಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬರ ಸಮೀಕ್ಷೆ ನಡೆಸಿ ಸರ್ಕಾರ ವಿಶೇಷ ಪರಿಹಾರ ಘೋಷಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಕೊಪ್ಪಳ ತಾಲೂಕಿನ ಅಳವಂಡಿ ಸಮೀಪದ ಮೂಲಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಬಿಜೆಪಿ ನಿಯೋಗದೊಂದಿಗೆ ಭೇಟಿ ನೀಡಿ ರೈತರ ಪರಿಸ್ಥಿತಿ ಪರೀಶೀಲಿಸಿದ ಬಳಿಕ ಮಾತನಾಡಿದ ಅವರು, ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣ ಒಣಗಿ ಹೋಗಿದ್ದು, ರೈತರು ಟ್ರ್ಯಕ್ಟರ್ಗಳ ಮೂಲಕ ಬೆಳೆಗಳನ್ನು ಹರಗಿ ನಾಶಪಡಿಸುವ ಪರಿಸ್ಥಿತಿ ಎದುರಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ಮೂಲಾಪುರ ಗ್ರಾಮದ ರೈತರೊಬ್ಬರು ಐದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸೂರ್ಯಕಾಂತಿ ಬೆಳೆಯನ್ನು ನಾಶಪಡಿಸಿರುವ ಘಟನೆ ದುಃಖಕರವಾಗಿದ್ದು, ಇದೇ ಪರಿಸ್ಥಿತಿ ಅನೇಕ ಗ್ರಾಮಗಳ ರೈತರಿಗೂ ಎದುರಾಗಿದೆ ಎಂದು ಅವರು ಹೇಳಿದರು. ಕೊಪ್ಪಳ ಜಿಲ್ಲೆ ಬಹುತೇಕ ಕೃಷಿ ಮಳೆಯನ್ನೇ ಅವಲಂಬಿಸಿದ್ದು, ನೀರಾವರಿ ಪ್ರದೇಶಗಳಿಗೂ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಯದ ಕಾರಣ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ ಎಂದು ಕ್ಯಾವಟರ್ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಮೆಕ್ಕೆಜೋಳ, ಹತ್ತಿ, ಉದ್ದು, ಹೆಸರು ಹಾಗೂ ಸೂರ್ಯಕಾಂತಿ ಬೆಳೆಗಳಿಗೆ ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಇನ್ನೂ ಬರ ಸಮೀಕ್ಷೆ ಆರಂಭಿಸದೇ ಇರುವುದಲ್ಲದೆ, ಕೃಷಿ ಇಲಾಖೆಯ ನೇತೃತ್ವದಲ್ಲಿಯೂ ವಿಳಂಬವಾಗುತ್ತಿರುವುದು ರೈತರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.
ತಕ್ಷಣ ಅಧಿಕಾರಿಗಳ ಮೂಲಕ ಬರ ಸಮೀಕ್ಷೆ ನಡೆಸಿ ವಿಶೇಷ ಪರಿಹಾರ ಘೋಷಿಸಬೇಕು. ಸಹಕಾರಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕ್ಗಳ ಕೃಷಿ ಸಾಲದ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸಬೇಕು. ರೈತರು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಬಿಜೆಪಿ ತಂಡವು ಕ್ಷೇತ್ರದಾದ್ಯಂತ ಬರ ಪರಿಸ್ಥಿತಿಯ ಅಧ್ಯಯನ ನಡೆಸಿ ಶೀಘ್ರದಲ್ಲೇ ಜಿಲ್ಲಾಧಿಕಾರಿಗಳಿಗೆ ಸಮಗ್ರ ವರದಿ ಸಲ್ಲಿಸುವುದಾಗಿ ತಿಳಿಸಿತು.
ಈ ಸಂದರ್ಭದಲ್ಲಿ ಬಿಜೆಪಿ ಲೋಕಸಭಾ ಕ್ಷೇತ್ರದ ಮಾಜಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಮುಖಂಡ ಮಹಾಂತೇಶ್ ಪಾಟೀಲ್ ಮೈನೆಹಳ್ಳಿ, ಗ್ರಾಮೀಣ ಮಂಡಲ ಅಧ್ಯಕ್ಷ ವೀರೇಶ್ ಸಜ್ಜನ್, ಮುಖಂಡ ವೆಂಕಟೇಶ್ ಹಾಲವರ್ತಿ, ಶ್ರೀನಿವಾಸ್ ಕಲಾದಗಿ, ಹನುಮಂತಪ್ಪ ಉಂಕಿ, ಬಸಣ್ಣ ಮೂಲಾಪುರ, ಅಂದಾನ ಗೌಡ ಪಾಟೀಲ್, ಸುರೇಶ್ ಚನ್ನಹಳ್ಳಿ, ಸಿದ್ದಪ್ಪ ಡಂಬಳ, ಬಸಣ್ಣ ಸಂಗರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 