ಎಲಬುರ್ಗ

ಬಸವರಾಜ ರಾಯರೆಡ್ಡಿ ನಾಮಪತ್ರ ಸಲ್ಲಿಕೆ

ಬಸವರಾಜ ರಾಯರೆಡ್ಡಿ ನಾಮಪತ್ರ ಸಲ್ಲಿಕೆ

ಯಲಬುರ್ಗಾ 17:  63-ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾಚನೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಬಸವರಾಜ ರಾಯರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಯಲಬುರ್ಗಾ ಪಟ್ಟಣದ ಶ್ರೀಮಗ್ಗಿ ಬಸವೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.  

ಈ ಸಂದರ್ಭದಲ್ಲಿ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಕುಕನೂರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಗೌಡ ಚಂಡೂರು, ಗೀರೀಜಾ ಸಂಗಟಿ, ಸೇರಿದಂತೆ ತಾಲೂಕಿನ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು.ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ಪಟ್ಟಣದ ಮಗ್ಗಿಬಸವೇಶ್ವರ ದೇವಸ್ಥಾನ ದಿಂದ ಕನ್ನಡ ಕ್ರಿಯಾಸಮಿತಿ ಮಾರ್ಗವಾಗಿ ಚನ್ನಮ್ಮ ವೃತ್ತ ಮುಖ್ಯ ರಸ್ತೆ ಮೂಲಕ ಸಾಗಿ ತಾಲೂಕ್ ತಹಶೀಲ್ದಾರ್ ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ.ಕೆ.ವಿ ಅವರಿಗೆ ನಾಮಪತ್ರ ಸಲ್ಲಿಸಿದರು. 


ಸುದ್ದಿ ಓದಿ