ಬ್ಯಾಡ್ಗಿ

ಬಸವೇಶ್ವರರು 12ನೇ ಶತಮಾನದಲ್ಲಿಯೇ ಸರ್ವ ಜನಾಂಗದವರಿಗೂ ಸಮಾನತೆಯನ್ನು ಪ್ರತಿಪಾದಿಸಿದ್ದ ಶರಣ

ಬಸವೇಶ್ವರರು 12ನೇ ಶತಮಾನದಲ್ಲಿಯೇ ಸರ್ವ ಜನಾಂಗದವರಿಗೂ ಸಮಾನತೆಯನ್ನು ಪ್ರತಿಪಾದಿಸಿದ್ದ ಶರಣ

ಬ್ಯಾಡಗಿ 21 : ಬಸವೇಶ್ವರರು 12ನೇ ಶತಮಾನದಲ್ಲಿಯೇ ಸರ್ವ ಜನಾಂಗದವರಿಗೂ ಸಮಾನತೆಯನ್ನು ಪ್ರತಿಪಾದಿಸಿದ್ದ ಶರಣ. ಆದಕಾರಣ ಇಂದು ಇಡೀ ಜಗತ್ತು ಅವರನ್ನು ಕೊಂಡಾಡುತ್ತದೆ ಎಂದು ತಹಶೀಲ್ದಾರ್ ಚಂದ್ರಶೇಖರ ನಾಯ್ಕ ತಿಳಿಸಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಸೋಮುವಾರ ನಡೆದ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.‘ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಬಾರದು ಎಂದು ಅವರಿಗೆ ಸ್ವಾತಂತ್ರ್ಯವನ್ನು ನೀಡಿದವರು ಬಸವಣ್ಣ. ನಮ್ಮ ದೇಶ ಸೇರಿ ನೆರೆಯ ರಾಷ್ಟ್ರಗಳು ಕೂಡ ಬಸವಣ್ಣ ಅವರ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಅವರ ದಾರಿಯಲ್ಲಿ ಸಾಗುತ್ತಿವೆ. ಸರ್ವ ಜನಾಂಗವರಿಗೂ ಪ್ರೀತಿ ಪಾತ್ರರಾಗಿದ್ದಾರೆ. ಅನೇಕ ಮಠ ಮಾನ್ಯಗಳು ಬಸವ ತತ್ವವನ್ನು ಪ್ರಚಾರ ಮಾಡುತ್ತಾ ಬಂದಿವೆ’ ಎಂದರು.ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಮುರಗೆಪ್ಪ ಶೆಟ್ಟರ.ವಿಶ್ವನಾಥ ಅಂಕಲಕೋಟಿ.ರಮೆಶ ಮೋಟೆಬೆನ್ನುರ.ಹಾಗೂ ಇಲಾಖೆ ಅಧಿಕಾರಿಗಳು ಹಾಗೂ ತಹಶಿಲ್ದಾರ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ