ಬೆಳಗಾವಿ

ಬಸವೇಶ್ವರ ಶಾಲೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಬಸವೇಶ್ವರ ಶಾಲೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ


ಬೆಳಗಾವಿ 02: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ 17 ವರ್ಷದೊಳಗಿನ ವೈಯಕ್ತಿಕ ಕ್ರೀಡಾಕೂಟದಲ್ಲಿ ಸ್ಥಳೀಯ ಬಸವೇಶ್ವರ ಪೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಬೆಳ್ಳೆವ್ವ ಮರಡಿ ಹ್ಯಾಮರ್ ಎಸೆತ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.  

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ ದೇವರಡ್ಡಿ ಹಾಗೂ ಸದಸ್ಯರು, ಮುಖ್ಯ ಶಿಕ್ಷಕ ಬಿ.ಎಸ್‌. ಆಲದಕಟ್ಟಿ, ವಸತಿ ನಿಲಯ ಪಾಲಕಿ ಆಶಾ ಪರಿಚಿತ್, ದೈಹಿಕ ಶಿಕ್ಷಕ ಎಂ.ಎನ್‌. ಚವಡಪ್ಪನವರ ಸೇರಿದಂತೆ ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ