ಸಸ್ಯ ಸಂಪತ್ತನ್ನು ರಕ್ಷಿಸುವಲ್ಲಿ ಸಕ್ರಿಯರಾಗಿ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ: : ನಮ್ಮ ಸುತ್ತಲಿನ ಪರಿಸರವನ್ನು ಹಸಿರುಮಯವಾಗಿಡಲು ಸಸ್ಯ ಸಂಪತ್ತನ್ನು ರಕ್ಷಿಸುವಲ್ಲಿ ನಾವು ಸಕ್ರಿಯರಾಗಬೇಕಿದ್ದು ನಮ್ಮ ಮನೆಗಳ ಸುತ್ತ ಮುತ್ತ ಸಸಿಗಳನ್ನು ನೆಡುವ ಮೂಲಕ ಸಸ್ಯ ಸಂರಕ್ಷಣೆ ಮಾಡಬೇಕೆಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸ್ಥಳೀಯ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಪುರಸಭೆ ಮತ್ತು ಪ್ರಾದೇಶಿಕ ವಲಯ ಅರಣ್ಯ ಇಲಾಖೆ, ಸಾಮಾಜಿಕ ವಲಯ ಅರಣ್ಯ ಇಲಾಖೆಯವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಪ್ಲಾಸ್ಟಿಕ್ ನಿಷೇಧಿಸುವ ಮೂಲಕ ಪುರಸಭೆಯಿಂದ ಹಮ್ಮಿಕೊಂಡ ಮೇರಿ ಲೈಪ್ ಮೇರಿ ಶಹರ ಯೋಜನೆಗೆ ಸಹಕಾರ ನೀಡಬೇಕೆಂದರು. ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ ಪ್ರತಿಜ್ಞಾವಿಧಿ ಬೋಧಿಸಿದರು. ಶಾಸಕ ವಿಶ್ವಾಸ ವೈದ್ಯ ಸಾರ್ವಜಿನಕರಿಗೆ ಸಸಿಗಳನ್ನು ವಿತರಿಸಿದರು.
ತಹಶಿಲ್ದಾರ ಜೆ.ಬಿ.ಜಕ್ಕನಗೌಡರ, ತಾ.ಪಂ ಇಓ ಯಶವಂತಕುಮಾರ, ವಲಯ ಅರಣ್ಯಾಧಿಕಾರಿ ಶಂಕರ ಅಂತರಗಟ್ಟಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಲಿಂಗರಡ್ಡಿ ಮಂಕಣಿ, ಬಿ.ಎಲ್.ಉಪ್ಪಾರ, ಬಸವರಾಜ ಗಾಣಗೇರ, ನ್ಯಾಯವಾದಿಗಳ ಸಂಘದ ಅದ್ಯಕ್ಷ ಸಂಜು.ಎಮ್.ಮುತ್ತೀನ, ಆರ್.ಎಮ್.ನಿಡವಣಿ, ಡಾ.ಅನೀಲ ಮರಲಿಂಗಣ್ಣವರ, ಟಿಎಚ್ಓ ಡಾ.ಮಹೇಶ ಚಿತ್ತರಗಿ, ಶ್ರೀಶೈಲ ಅಕ್ಕಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ ಸೇರಿದಂತೆ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ಶಿಕ್ಷಕರು ಉಪಸ್ಥಿತರಿದ್ದರು. ಸವದತ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಸಕ ವಿಶ್ವಾಸ ವೈದ್ಯರವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.