ಬಾಲ್ಯ ವಿವಾಹದ ಬಗ್ಗೆ ಎಚ್ಚರವಿರಲಿ: ನ್ಯಾ. ಚಂದ್ರಶೇಖರ ದಿಡ್ಡಿ
Be aware of child marriage: Justice Chandrashekar Diddi
ಮಹಾಲಿಂಗಪುರ 18: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮದೇ ಆದ ಶಿಕ್ಷಣದ ಹಕ್ಕನ್ನು ಬಲಪಡಿಸಿಕೊಳ್ಳಬೇಕು. ಇತ್ತೀಚೆಗೆ ನಡೆಯುತ್ತಿರುವ ಬಾಲ್ಯ ವಿವಾಹದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಿಗಾಗಿ ಸರ್ವೋಚ್ಚ ನ್ಯಾಯಾಲಯ ಆಶಾ ಎಂಬ ಯೋಜನೆ ಮಾಡಿ 15100 ಸಹಾಯವಾಣಿ ನೀಡಿದೆ. ಶಿಕ್ಷಣದ ಜಾಗೃತಿ ಪಡಿಸುವ ಕಾರ್ಯದಲ್ಲಿ ತೊಡಗಿ ಬಾಲಕಾರ್ಮಿಕರಿದ್ದರೆ ಕೂಡಲೇ ತಿಳಿಸಿ ಜೊತೆಗೆ ಸುತ್ತಮುತ್ತಲು ಅನೈತಿಕ ಚಟುವಟಿಕೆಗಳು ಕಂಡು ಬಂದರೆ ಸಮೀಪದ ಪೊಲೀಸ್ ಠಾಣೆಗೆ ಕರೆಮಾಡಿ ತಿಳಿಸಿ ಎಂದು ಹಿರಿಯ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಭಾರಿ ಪ್ರಾಚಾರ್ಯ ಎಸ್ ಎಲ್ ಜೋಡಟ್ಟಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ ಜಿಡ್ಡಿಮನಿ, ಉಪಾಧ್ಯಕ್ಷ ವಿಜಯ ಸಭಕಾಳೆ, ಸದಸ್ಯರಾದ ಶೇಖರ ಮಗದುಮ, ಮಹಾಂತೇಶ ಪಾತ್ರೋಟ, ರವಿ ಗಿರಿಸಾಗರ ಉಪನ್ಯಾಸಕರಾದ ಸಿದ್ರಾಮ ಸವಸುದ್ದಿ, ರಾಜೇಶ್ವರಿ ತುಕಾನಟ್ಟಿ, ದೀಪಾ ಪಾಟೀಲ, ಶ್ವೇತಾ ಮರನಾಳ, ಪಾರ್ವತಿ ನುಚ್ಚಂಡಿ, ದಾನಮ್ಮ ಹಳ್ಳಿ, ವಿಶಾಲಾಕ್ಷಿ ನಾಯಕ ಸೇರಿದಂತೆ ವಿದ್ಯಾರ್ಥಿಗಳಿದ್ದರು. ಶಿಕ್ಷಕಿ ವಿನುತಾ ಕೊಳಕಿ ನಿರೂಪಿಸಿ, ವಂದಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 