ಶಿಗ್ಗಾವ್

ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ವಹಿಸಿ: ತಳವಾರ

ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ವಹಿಸಿ: ತಳವಾರ

ಲೋಕದರ್ಶನ ವರದಿ 

ಶಿಗ್ಗಾವಿ 13:  ಪ್ರಸ್ತುತ ದಿನಗಳಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ವಹಿಸಿ ಗ್ರಾಮಗಳ ರೈತರು, ಮಹಿಳೆಯರು, ಯುವಕರು, ಅನೇಕ ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ ಹೇಳಿದರು. 

ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ರಂಬಾಪೂರಿ ಮಹಾವಿದ್ಯಾಲಯ ಹಾಗೂ ಗ್ರಾಮ ಪಂಚಾಯತಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪಟ್ಟಣಕ್ಕೆ ಸಮೀಪವಿರುವ ಗ್ರಾಮಗಳು ಪಟ್ಟಣದ ದಿನಚರಿ, ಉಡುಗೆತೊಡುಗೆ, ಊಟ ಉಪಹಾರದ ಕ್ರಮಗಳನ್ನು ಅನುಸರಿಸಿ ಮೊದಲಿನ ಗ್ರಾಮೀಣ ಭಾಗದ ಸಂಪ್ರದಾಯವನ್ನು ಮರೆಯುವುದರ ಮುಖಾಂತರ ವಿವಿಧ ಬಗೆಯ ಖಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದರು. 

ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಜಯದೇವ ಅಗಡಿ ಮಾತನಾಡಿ ಪ್ರತಿಯೊಬ್ಬ ಯುವಕರು ಹೆಚ್ಚು ಹೆಚ್ಚು ಬಾರಿರಕ್ತದಾನ ಮಾಡುವುದರಿಂದ ನಿಮ್ಮರಕ್ತಕ್ಕೆ ಹೊಸ ಚೈತನ್ಯ ಬರುವುದರ ಜೊತೆಗೆ ಇನ್ನೊಂದು ಜೀವಿಗೆ ಪ್ರಾಣ ನೀಡಿದಂತೆ ಆಗುತ್ತದೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತವಾಗಿರ ಬೇಕಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ 15 ಜನಗ್ರಾಮಸ್ಥರು ರಕ್ತದಾನ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು, ಗ್ರಾಮಸ್ಥರು, ರೈತ ಭಾಂದವರು, ಮಹಿಳೆಯರು ಉಪಸ್ಥಿತರಿದ್ದರು. ಪ್ರೊ. ಎಸ್‌.ಬಿ.ಪೂಜಾರ, ಎನ್‌.ಎಸ್‌.ಎಸ್‌. ಕಾರ್ಯಕ್ರಮ ಅಧಿಕಾರಿಗಳು ಕಾರ್ಯಕ್ರಮ ನಿರ್ವಹಿಸಿದರು. 


ಸುದ್ದಿ ಓದಿ