ರೈತರೊಡನೆ ಸೌಜನ್ಯದಿಂದ ವರ್ತಿಸಬೇಕು; ಶಾಸಕ ದೊಡ್ಡನಗೌಡ ಪಾಟೀಲ್
ಕುಷ್ಟಗಿ 30 : ರೈತರೊಡನೆ ಸೌಜನ್ಯದಿಂದ ವರ್ತಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೃಷಿ ಇಲಾಖೆ ವತಿಯಿಂದ ಮಂಗಳವಾರ ಬೆಳಿಗ್ಗೆ ತಾಲೂಕಿನ ರೈತರಿಗೆ ಬಿತ್ತನೆ ಬೀಜ ವಿತರಿಸಿ ನಂತರ ಮಾತನಾಡಿದ ಅವರು ಹೈಬ್ರೀಡ್ ಸಜ್ಜೆ, ಮೆಕ್ಕೆಜೋಳ, ತೊಗರಿ, ಸೂರ್ಯಕಾಂತಿ, ಹೆಸರು ಬೀಜಗಳು ಕೃಷಿ ಇಲಾಖೆಯಲ್ಲಿ ದಾಸ್ತಾನು ಇದೆ ರೈತರು ಸರತಿ ಸಾಲಿನಲ್ಲಿ ನಿಂತು ಯಾರು ಜಗಳವಾಡದೆ ಅಧಿಕಾರಿಗಳು ಸ್ಪಂದಿಸಿ ಬಿತ್ತನೆ ಬೀಜ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ 2022-23 ನೇ ಸಾಲಿನಲ್ಲಿ ತಾಲೂಕಿನ ರೈತರಿಗೆ 2100 ಕ್ವೀಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 79000 ಸಾವಿರ ಹೆಕ್ಟರ್ ಭೂಮಿಯಲ್ಲಿ ಬಿತ್ತನೆ ಮಾಡಿದ್ದಾರೆ. 2023-24 ನೇ ಸಾಲಿನಲ್ಲಿ 2400 ಕ್ವೀಂಟಲ್ ಬಿತ್ತನೆ ಬೀಜ ವಿತರಣೆ ಗುರಿ ನಿಗದಿ ಮಾಡಲಾಗಿದೆ.
83000 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಗುರಿ ಸಾಧನೆ ಮಾಡಲಾಗಿದೆ ತಾಲೂಕಿನ ರೈತರು ರೈತರು ಕೃಷಿ ಇಲಾಖೆಗೆ ಬೇಟಿ ನೀಡಿ ಹೈಬ್ರೀಡ್ ಸಜ್ಜೆ, ಮೆಕ್ಕೆಜೋಳ, ತೊಗರಿ, ಸೂರ್ಯಕಾಂತಿ, ಹೆಸರು ಬೀಜಗಳು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ, ಅಶೋಕ ಬಳೂಟಗಿ, ಕೃಷಿ ಅಧಿಕಾರಿ ಪ್ರಮೋದ, ತಾಂತ್ರಿಕ ವ್ಯವಸ್ಥಾಪಕ ಬಸವರಾಜ ಪಾಟೀಲ್, ರೈತ ಸಂಪರ್ಕ ಕೇಂದ್ರದ ಲೆಕ್ಕ ಸಂಗಮೇಶ ಹಾಗೂ ತಾಲೂಕಿನ ವಿವಿಧ ಪ್ರದೇಶದ ರೈತರು ಭಾಗವಹಿಸಿ ಬಿತ್ತನೆ ಬೀಜ ಪಡೆದರು.