ಕಾಡಂಚಿನ ಗ್ರಾಮಗಳಲ್ಲಿ ಕರಡಿ ದಾಳಿ: ಇಬ್ಬರಿಗೆ ಗಾಯ
Bear attacks in forest-edge villages: Two injured
ದಾಂಡೇಲಿ, ಸೆ. 8: ದಾಂಡೇಲಿ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಬಾಮಣಗಿ ಹಾಗೂ ಫಣಸೋಲಿ ಗ್ರಾಮಗಳಲ್ಲಿ ಒಂದು ವಾರದ ಅವಧಿಯಲ್ಲಿ ಎರಡು ಕರಡಿ ದಾಳಿ ಘಟನೆಗಳು ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಬಾಮಣಗಿ ಗ್ರಾಮದಲ್ಲಿ ಹೊಲದ ಕೆಲಸದಲ್ಲಿ ತೊಡಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಘಟನೆ ಮಾಸುವ ಮುನ್ನವೇ ಫಣಸೋಲಿ ಗ್ರಾಮದಲ್ಲಿಯೂ ಕರಡಿ ದಾಳಿ ನಡೆದಿದೆ. ಭಾನುವಾರ ಸಂಜೆ ಎಮ್ಮೆ ಮೇಯಿಸುತ್ತಿದ್ದ ಗೌಳಿ ಸಮುದಾಯದ ಅಪ್ಪು ಪಿಂಗಳೆ ಅವರ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.
ಕರಡಿಯಿಂದ ತಪ್ಪಿಸಿಕೊಳ್ಳಲು ಅಪ್ಪು ಧೈರ್ಯದಿಂದ ಪ್ರತಿರೋಧಿಸಿದ್ದು, ಕರಡಿಯೊಂದಿಗೆ ಸೆಣಸಾಡಿ ಅದನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅವರು ಜೋರಾಗಿ ಕೂಗಿಕೊಂಡಾಗ ಸ್ಥಳೀಯರು ಧಾವಿಸಿ ಗಾಯಗೊಂಡ ಅವರನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿ, ಅಗತ್ಯ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಂಡಿದ್ದಾರೆ.
ಕಾಡಂಚಿನ ಗ್ರಾಮಗಳಲ್ಲಿ ಕೃಷಿ, ಜಾನುವಾರು ಮೇಯಿಸುವಿಕೆ ಸೇರಿದಂತೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿರುವ ಗ್ರಾಮಸ್ಥರಿಗೆ ಕರಡಿ ಸಂಚಾರದ ಕುರಿತು ಅರಣ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದಿಂದ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಕರಡಿ ಸಂಚಾರದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 