ಬೆಳಗಾವಿ: ಬಳ್ಳಾರಿ ನಾಲೆ ಅವಾಂತರ ಹಿ ಸಾವಿರಾರು ಎಕರೆ ಭತ್ತದ ಬೆಳೆ ಜಲಾವೃತ, ರೈತರ ಸಂಕಷ್ಟ

ಬೆಳಗಾವಿ: ಬಳ್ಳಾರಿ ನಾಲೆ ಅವಾಂತರ ಹಿ ಸಾವಿರಾರು ಎಕರೆ ಭತ್ತದ ಬೆಳೆ ಜಲಾವೃತ, ರೈತರ ಸಂಕಷ್ಟ Belagavi: Havoc caused by the Ballari canal leaves thousands of acres of paddy crops submerged; farm

ಲೋಕದರ್ಶನ ವರದಿ

  ಬೆಳಗಾವಿ, ಆ. 2: ಈ ವರ್ಷ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೂ, ಬೆಳಗಾವಿ ನಗರದ ಸಮೀಪದ ಬಳ್ಳಾರಿ ನಾಲೆಯ ಅವಾಂತರದಿಂದ ಸಾವಿರಾರು ಎಕರೆ ಭತ್ತದ ಬೆಳೆ ಜಲಾವೃತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  

ಮೊದಲ ಹಂತದಲ್ಲಿ ಬಿತ್ತನೆ ಮಾಡಿದ್ದ ಭತ್ತದ ಬೆಳೆ ಮಳೆ ಕೊರತೆಯಿಂದ ಹಾನಿಗೊಳಗಾಗಿತ್ತು. ಇದೀಗ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ಬಳ್ಳಾರಿ ನಾಲೆ ತುಂಬಿ ಹರಿದು, ಅದರ ನೀರು ಸುತ್ತಮುತ್ತಲಿನ ಭತ್ತದ ಗದ್ದೆಗಳಿಗೆ ನುಗ್ಗಿದೆ. ಪರಿಣಾಮ ಸಾವಿರಾರು ಎಕರೆ ಪ್ರದೇಶದ ಭತ್ತದ ಬೆಳೆ ನೀರಿನಲ್ಲಿ ಮುಳುಗಿ ಕೊಳೆಯುವ ಸ್ಥಿತಿ ನಿರ್ಮಾಣವಾಗಿದೆ.  

ಬೆಳಗಾವಿ ನಗರದ ಹೊರವಲಯದ ಯಳ್ಳೂರು ಮಾರ್ಗದ ಸುತ್ತಮುತ್ತಲಿನ ಪ್ರದೇಶದಲ್ಲಿ ದೇಶದ ಪ್ರಸಿದ್ಧ ಬಾಸುಮತಿ ಅಕ್ಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ ಹಲವು ವರ್ಷಗಳಿಂದ ಬಳ್ಳಾರಿ ನಾಲೆಯ ಹೂಳೆತ್ತುವ ಕಾಮಗಾರಿ ನಡೆಯದ ಕಾರಣ ನಾಲೆಯ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟುಮಾಡುತ್ತಿದೆ.  

ದಶಕಗಳಿಂದ ಬಳ್ಳಾರಿ ನಾಲೆ ಹೂಳೆತ್ತುವಂತೆ ರೈತರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ, ಕಾಮಗಾರಿಗೆ ಇನ್ನೂ ಚಾಲನೆ ಸಿಕ್ಕಿಲ್ಲ ಎಂಬುದು ರೈತರ ಆರೋಪವಾಗಿದೆ.  ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಬಳ್ಳಾರಿ ನಾಲೆಯ ಹೂಳೆತ್ತುವ ಕಾಮಗಾರಿ ಕೈಗೊಂಡು, ರೈತರ ಜಮೀನುಗಳಿಗೆ ನೀರು ನುಗ್ಗುವುದನ್ನು ತಡೆಯಬೇಕು. ಜೊತೆಗೆ ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.